Advertisement

Congress leader; ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

04:45 PM Feb 20, 2024 | Team Udayavani |

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿಯ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಆರು ಅವಧಿಗೆ ಸೇವೆ ಸಲ್ಲಿಸಿದ ನಂತರ ಸೋನಿಯಾ ಮೇಲ್ಮನೆಯಲ್ಲಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜಸ್ಥಾನದಿಂದ ಆಯ್ಕೆಯಾಗಿರುವ ಮನಮೋಹನ್ ಸಿಂಗ್ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ.

Advertisement

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ರಾಜ್ಯಸಭೆಯಲ್ಲಿ ಸೇವೆ ಸಲ್ಲಿಸಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾದ ಗಾಂಧಿ ಕುಟುಂಬದ ಎರಡನೇ ಸದಸ್ಯೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next