Advertisement
ಬೆಂಗಳೂರಿನಲ್ಲಿ ಪ್ರತಿಭಟನೆ,ಮನವೊಲಿಕೆ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೆ ಇರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಮೇಯರ್ ಗಂಗಾಂಬಿಕೆ, ಮಾಜಿ ಮೇಯರ್ ಪದ್ಮಾವತಿ, ಮಂಜುನಾಥ್ ರೆಡ್ಡಿ ಮತ್ತು ಕಾಂಗ್ರೆಸ್ ಕಾರ್ಪೋರೇಟರ್‌ಗಳು ಪ್ರತಿಭಟನೆಯಲ್ಲಿ ಭಾಗಿಯಾದರು.
ಈಗಾಗಲೇ ರಾಜೀನಾಮೆ ಬೆದರಿಕೆ ಹಾಕಿ ಬೆಂಬಲಿಗರೊಂದಿಗೆ ಚರ್ಚೆಯಲ್ಲಿ ನಿರತರಾಗುವ ಮೂಲಕ ಪಕ್ಷಕ್ಕೆ ಭಾರಿ ಶಾಕ್ ನೀಡಿರುವ ರಮೇಶ್ ಜಾರಕಿ ಹೊಳಿ ಅವರನ್ನು ತಣ್ಣಗಾಗಿಸಲು ಸಹೋದರ, ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ಕಾಂಗ್ರೆಸ್ ನಾಯಕರು ಕಸರತ್ತು ಆರಂಭಿಸಿದ್ದಾರೆ. ಲಖನ್ ಜಾರಕಿಹೊಳಿ ಅವರನ್ನೂ ಸಂಪರ್ಕಿಸಿರುವುದಾಗಿ ವರದಿಯಾಗಿದೆ.
Related Articles
ಸಚಿವ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಅವರು ಕೆಲ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದ್ದು ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿದೆ ಎಂದು ಹೇಳಲಾಗಿದೆ. ಇಂದು ಸಂಜೆಯ ಒಳಗೆ ಖಾತೆಗಳನ್ನು ಹಂಚಿಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.
Advertisement