Advertisement

ಲೈಂಗಿಕ ದೌರ್ಜನ್ಯ: ಸಿಬಿಐನಿಂದ ಕಾಂಗ್ರೆಸ್‌ ನಾಯಕ ವೇಣುಗೋಪಾಲ್‌ ವಿಚಾರಣೆ

07:31 PM Aug 17, 2022 | Team Udayavani |

ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆಪ್ತ, ರಾಜ್ಯಸಭಾ ಸದಸ್ಯ ಕೆ.ಸಿ.ವೇಣುಗೋಪಾಲ್‌ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ.

Advertisement

ಕೇರಳದ ಸೋಲಾರ್‌ ಹಗರಣದಲ್ಲಿ ಪ್ರಮುಖ  ಆರೋಪಿಯಾಗಿರುವ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದೆ.

ಕಳೆದ ವಾರ ಈ ಪ್ರಕ್ರಿಯೆ ನಡೆದಿತ್ತು. ಲೈಂಗಿಕ ಕಿರುಕುಳ ಕೇಸಿಗೆ ಸಂಬಂಧಿಸಿದಂತೆ  ಕೇರಳದ ಮಾಜಿ ಸಿಎಂ ಉಮ್ಮನ್‌ ಚಾಂಡಿ, ಹಿಬಿ ಎಡೆನ್‌, ಬಿಜೆಪಿಯ ಎ.ಪಿ.ಅಬ್ದುಲ್ಲಾ ಕುಟ್ಟಿ ಅವರ ವಿರುದ್ಧವೂ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next