Advertisement
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸಚಿವ ಆನಂದ್ ಸಿಂಗ್ ಅವರು ವಿಜಯನಗರದಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಭವ್ಯ ಬಂಗಲೆ ನಿರ್ಮಿಸಿದ್ದಾರೆ. ರಾಜಕಾಲುವೆ ಒತ್ತುವರಿ ಸಂಬಂಧ ಮಾಧ್ಯಮಗಳಿಗೆ ದಾಖಲೆ ನೀಡಿದ ದಲಿತ ಸಮುದಾಯದ ಪೋಲಪ್ಪ ಎಂಬವರ ಕುಟುಂಬದರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ, ಕಾಂಗ್ರೆಸ್ ಮುಖಂಡ ಬಸವರಾಜ್ ಹಿಟ್ನಾಳ್ ಮತ್ತಿತರರು ಉಪಸ್ಥಿತರಿದ್ದರು. ಈ ಪ್ರಕರಣದ ಸಂಬಂಧ ಕೂಡಲೇ ಸಚಿವ ಆನಂದ್ ಸಿಂಗ್ ದಸ್ತಗಿರಿ ಆಗಬೇಕು. ಆತ್ಮಹತ್ಯೆಗೆ ಪ್ರಚೋದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಿಸಬೇಕು. ಆನಂದ್ ಸಿಂಗ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಒಂದು ವೇಳೆ ಮುುಖ್ಯಮಂತ್ರಿಗಳು ಈ ಕೆಲಸ ಮಾಡದಿದ್ದರೆ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ, ಆನಂದ್ ಸಿಂಗ್ ಅವರನ್ನು ವಜಾಗೊಳಿಸಬೇಕು. ಜತೆಗೆ ಈ ಪ್ರಕರಣವನ್ನು ರಾಜ್ಯದ ಹೈಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.