Advertisement

ಎಚ್‌ಡಿಕೆ ಹೇಳಿಕೆಗೆ ಕಾಂಗ್ರೆಸ್‌ ನಾಯಕರ ಅಸಮಾಧಾನ

07:00 AM Jul 27, 2018 | Team Udayavani |

ಬೆಂಗಳೂರು: ಉತ್ತರ ಕರ್ನಾಟಕ ವಿಚಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಉತ್ತರ ಕರ್ನಾಟಕ
ಭಾಗದ ಕಾಂಗ್ರೆಸ್‌ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ.

Advertisement

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ಗೆ ನಿರೀಕ್ಷಿತ ಸ್ಥಾನ ಬರದಿರಬಹುದು. ಆದರೆ, ಕಾಂಗ್ರೆಸ್‌ಗೆ ಬೆಂಬಲ ದೊರೆತಿದೆ.
ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇರುವಾಗ ಉತ್ತರ ಕರ್ನಾಟಕದ ಬಗ್ಗೆ ಸಿಎಂ ಹೇಳಿಕೆ ಕಾಂಗ್ರೆಸ್‌ ಮೇಲೆ
ಪರಿಣಾಮ ಬೀರಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಸಮನ್ವಯ ಸಮಿತಿ ಸಭೆಯಲ್ಲಿ ಇಂತಹ ಹೇಳಿಕೆ ನೀಡದಂತೆ ಕುಮಾರಸ್ವಾಮಿಗೆ ಸೂಚಿಸಬೇಕೆಂದು ಉತ್ತರ ಕರ್ನಾಟಕದ ಭಾಗದ ಕಾಂಗ್ರೆಸ್‌ ನಾಯಕರು ಡಾ.ಜಿ.ಪರಮೇಶ್ವರ್‌ ಹಾಗೂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದಾರೆಂದು ಹೇಳಲಾಗಿದೆ.

ಮುಂದಿನ ವರ್ಷ ಲೋಕಸಭೆ ಚುನಾವಣೆ ಎದುರಿಸಬೇಕಾಗಿದ್ದು, ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಜನರು ನಮಗೆ ಮತ ಹಾಕಿಲ್ಲ ಎಂಬ ಅರ್ಥದ ಮಾತುಗಳನ್ನು ಆಡಿದರೆ ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಹೆಚ್ಚು ನಷ್ಟ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಚಿಕ್ಕೋಡಿ, ರಾಯಚೂರು ಕಲಬುರಗಿ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿರಬಹುದು. ಆದರೆ, ಬಳ್ಳಾರಿ, ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿ ಆ ಭಾಗದ ಕ್ಷೇತ್ರಗಳಲ್ಲಿ ಬಿಜೆಪಿಗೆ ನೇರ ಪೈಪೋಟಿ ನೀಡಿದೆ. ಹೀಗಾಗಿ, ಕಾಂಗ್ರೆಸ್‌ಗೆ ಆ ಭಾಗದವರು ಶಕ್ತಿ ತುಂಬಿದ್ದಾರೆ.

ಮೊದಲಿನಿಂದಲೂ ಉತ್ತರ ಕರ್ನಾಟಕ ಭಾಗದ ಜನರು ಕಾಂಗ್ರೆಸ್‌ನ ಕೈ ಹಿಡಿದಿದ್ದಾರೆ. ಮಹದಾಯಿ, ಕೃಷ್ಣಾ ವಿಚಾರ ಸೇರಿ ಅಲ್ಲಿನ ಜನರ ಜತೆ ಕಾಂಗ್ರೆಸ್‌ ಪಕ್ಷ ಭಾವನಾತ್ಮಕವಾಗಿ ಇದೆ.

ಹೀಗಾಗಿ, ಇನ್ನು ಮುಂದೆ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ಕುಮಾರಸ್ವಾಮಿಯವರ ಹೇಳಿಕೆಗಳಿಗೆ ಬ್ರೇಕ್‌ ಹಾಕಬೇಕೆಂದು
ಒತ್ತಡ ಹಾಕಿದ್ದಾರೆ. ಇದೇ ಕಾರಣಕ್ಕೆ ಜುಲೈ 29 ಅಥವಾ 30 ರಂದು ಸಮನ್ವಯ ಸಮಿತಿ ಸಭೆ ಕರೆಯಲು ತೀರ್ಮಾನಿಸಲಾಗಿದೆ
ಎಂದು ಹೇಳಲಾಗಿದೆ.

Advertisement

ಉತ್ತರ ಕರ್ನಾಟಕ ಅಭಿವೃದ್ಧಿಗೆ ಶೇ.60ರಷ್ಟು ಬಜೆಟ್‌ ಅನುದಾನ ಹೋಗಿದೆ. ನಾವು ಎಷ್ಟು ಅಭಿವೃದ್ಧಿ ಮಾಡಿದರೂ ಅಲ್ಲಿನ ಜನರು ಓಟು ಹಾಕಲ್ಲ ಎಂದು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹೇಳಿದರೆನ್ನಲಾದ ಮಾತುಗಳು ಇದೀಗ ವಿವಾದ ಸ್ವರೂಪ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next