Advertisement

ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರು ವಶಕ್ಕೆ

02:37 PM Apr 14, 2022 | Team Udayavani |

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಪ್ರಮುಖ ನಾಯಕರನ್ನು ಗುರುವಾರ ಪೊಲೀಸರು ರೇಸ್ ಕೋರ್ಸ್ ರಸ್ತೆಯಲ್ಲಿ ತಡೆದು ವಶಕ್ಕೆ ಪಡೆದರು.

Advertisement

ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ವಿಧಾನಸೌಧದ ಎದುರು ಮಧ್ಯಾಹ್ನ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ,ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಗೋವಿಂದರಾಜ್ ಮತ್ತಿತರರನ್ನು ವಶಕ್ಕೆ ಪಡೆಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next