Advertisement
ಅನಾಯಾಸವಾಗಿ ಕಳೆದುಕೊಂಡಂತಾಯಿತು’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಸಮಿತಿ ಮುಂದೆ ಸಮರ್ಥನೆ ನೀಡಿದ್ದಾರೆ.
Related Articles
Advertisement
ನೇಹಾ ಹತ್ಯೆಯಿಂದ ಕಾಂಗ್ರೆಸ್‌ಗೆ ಹಿನ್ನಡೆ: ವಿನಯ್ಸಮಿತಿ ಭೇಟಿಯಾದ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯೂ ಎಸ್‌ಡಿ) ಅಧ್ಯಕ್ಷ ವಿನಯ ಕುಲಕರ್ಣಿ, ಧಾರವಾಡ ಜಿಲ್ಲೆಯಲ್ಲಿ ಯಾರೂ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ನೇಹಾ ಹತ್ಯೆ ಪ್ರಕರಣದಿಂದ ನಮಗೆ ಹಿನ್ನಡೆಯಾಯಿತು. ಈ ಪ್ರಕರಣದಲ್ಲಿ ಬಿಜೆಪಿಯವರು ರಾಜಕಾರಣ ಮಾಡಿದರು. ಹತ್ಯೆಯಾದ ನೇಹಾ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ಆಗಿದ್ದರೂ ಬಿಜೆಪಿಯವರು ಅವರ ದಾರಿ ತಪ್ಪಿಸಿದರು ಎಂದು ಆರೋಪಿಸಿದರು. ಧಾರವಾಡದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಅನ್ನುವುದಿತ್ತು. ಗ್ಯಾರಂಟಿಗಳು ಕೈಹಿಡಿಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಕೊನೆಯ ಕ್ಷಣದಲ್ಲಿ ಉಲ್ಟಾ ಆಯಿತು. ಹಿನ್ನಡೆಗೆ ಯಾವ್ಯಾವ ಅಂಶಗಳು ಕಾರಣವಾದವು ಎಂಬುದನ್ನು ಸಮಿತಿ ಗಮನಕ್ಕೆ ತರಲಾಗಿದೆ ಎಂದರು. ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ: ಡಿಕೆಶಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ಕಾರ್ಯಕರ್ತರೆಲ್ಲರೂ ಒಟ್ಟಾಗಿ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಿಷ್ಟು ಸಚಿವರಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ ಎಂದು ಸಮಜಾಯಿಷಿ ನೀಡಿದರು. ಎಲ್ಲ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋಧನ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರೂ ಸಮಿತಿ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ಪ್ರತಿಭಟನೆ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೋ ಅದನ್ನು ಕೊಡುತ್ತೇವೆ.
-ಡಿ.ಕೆ.ಶಿವಕುಮಾರ್, ಡಿಸಿಎಂ ಸತ್ಯ ಶೋಧನ ಸಮಿತಿ
ಭೇಟಿಯಾಗದ ಸಿಎಂ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಡೆಯ ಪರಾಮರ್ಶೆಗೆ ಸಂಬಂಧಿಸಿದಂತೆ ಆಗಮಿಸಿದ್ದ ಎಐಸಿಸಿಯ ಸತ್ಯಶೋಧನ ಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂ ದಿನ ಭೇಟಿಯಾಗಲಿಲ್ಲ. ಶುಕ್ರವಾರದ ಮುಖ್ಯಮಂತ್ರಿಗಳ ಕಾರ್ಯಕಲಾಪಗಳ ಪಟ್ಟಿಯಲ್ಲಿ ಸತ್ಯಶೋಧನ ಸಮಿತಿ ಭೇಟಿಗೆ ಮಧ್ಯಾಹ್ನ 12 ಗಂಟೆಗೆ ಸಮಯ ನಿಗದಿಯಾಗಿತ್ತು. ಆದರೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನೀರು ಬಿಡುವಂತೆ ನೀಡಿದ ನಿರ್ದೇಶನ ಸೇರಿ ಹಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಕಾರ್ಯಕಲಾಪ ಪಟ್ಟಿ ಬಿಡುಗಡೆ ಮಾಡಲಾಯಿತು. ಅದರಂತೆ ಸಮಿತಿ ಭೇಟಿಯಾಗಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.