Advertisement
ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ದಿನೇಶ್ ಹಾಗೂ ಬೀದರ್ ಕ್ಷೇತ್ರದಿಂದ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಪತ್ನಿ ಡಾ.ಗೀತಾ ಈಶ್ವರ್ ಖಂಡ್ರೆ ಅವರನ್ನು ಚುನಾವಣಾ ಕಣಕ್ಕಿಳಿಸಲು ತೆರೆ ಮರೆಯಲ್ಲಿ ಕಸರತ್ತು ಆರಂಭವಾಗಿದೆ. ದಕ್ಷಿಣ ಕನ್ನಡ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಂದ ಮಹಿಳೆಯರು ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದು ಅವರ ಜತೆಗೆ ಟಬು ದಿನೇಶ್ ಹಾಗೂ ಡಾ. ಗೀತಾ ಈಶ್ವರ್ ಖಂಡ್ರೆ ಹೆಸರು ಕೇಳಿಬರುತ್ತಿದೆ.
Related Articles
Advertisement
ಡಾ. ಗೀತಾ ಈಶ್ವರ್ ಖಂಡ್ರೆಯವರು ವೈದ್ಯರಾಗಿದ್ದು, ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಇಟ್ಟುಕೊಂಡಿದ್ದಾರೆ. ಅಲ್ಲದೇ ಈಶ್ವರ್ ಖಂಡ್ರೆಯವರ ಚುನಾವಣೆಯಲ್ಲೂ ಗೀತಾ ಅವರೇ ಮನೆಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ಹೆಚ್ಚು ಪರಿಚಿತರಾಗಿದ್ದಾರೆ. ಹೀಗಾಗಿ ಅವರನ್ನೇ ಕಣಕ್ಕಿಳಿಸಲು ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ.
ಬೀದರ್‌ನಿಂದ ರಾಹುಲ್‌ಗೆ ಆಹ್ವಾನ: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ಗೆ ಹೆಚ್ಚು ಅನುಕೂಲಕರವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐವರು ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ ಸದಸ್ಯರಿದ್ದಾರೆ.
ಹೀಗಾಗಿ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ನ ಹೆಚ್ಚಿನ ಸ್ಥಾನ ಗಳಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬೀದರ್ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನಿಸಲಾಗಿದೆ ಎನ್ನಲಾಗುತ್ತಿದೆ. ಬೀದರ್‌ನಲ್ಲಿ ರಾಹುಲ್ ಗಾಂಧಿ ಸ್ಪರ್ಧೆಯಿಂದ ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎನ್ನುವ ಲೆಕ್ಕಾಚಾರ ಅಡಗಿದೆ.