Advertisement
ಇಬ್ಬರು ಪಕ್ಷೇತರ ಶಾಸಕರು ಬೆಂಬಲ ವಾಪಸ್ ಪಡೆದಿರುವುದರಿಂದ ಸದ್ಯಕ್ಕೆ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ. ಒಂದು ವೇಳೆ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರೆ, ಅವರ ರಾಜೀನಾಮೆ ಅಂಗೀಕಾರ ವಾಗದಂತೆ ನೋಡಿಕೊಳ್ಳಲು ಬೇಕಾದ ತಂತ್ರ ಗಾರಿಕೆ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ.
Related Articles
Advertisement
ಇದೆಲ್ಲ ಬೆಳವಣಿಗೆ ನಡೆಯಲು ಕನಿಷ್ಠ ಹದಿ ನೈದರಿಂದ ಇಪ್ಪತ್ತು ದಿನ ಸಮಯ ತೆಗೆದು ಕೊಳ್ಳುವುದರಿಂದ ಅಷ್ಟರೊಳಗೆ ಹರಿಯಾಣದ ಗುರುಗಾಂವ್‌ನಲ್ಲಿರುವ ಬಿಜೆಪಿ ಶಾಸಕರು ರಾಜ್ಯಕ್ಕೆ ವಾಪಸ್ ಆಗಿರುತ್ತಾರೆ. ಆ ಸಂದರ್ಭದಲ್ಲಿ ಬಿಜೆಪಿ ಬಗ್ಗೆ ಬೇಸರಗೊಂಡು ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವ ಬಿಜೆಪಿ ಶಾಸಕರನ್ನು ಪಕ್ಷಕ್ಕೆ ಆಹ್ವಾನಿಸಿ ಆಪರೇಷನ್ ಹಸ್ತ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಶಾಸಕರ ಸಂಪರ್ಕಕ್ಕೆ ಪ್ರಯತ್ನ: ಬಿಜೆಪಿಯಲ್ಲಿ ಬೇಸರಗೊಂಡಿರುವ ಶಾಸಕರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಆರಂಭಿಸಿದ್ದಾರೆಂದು ತಿಳಿದು ಬಂದಿದೆ. ಗೋವಿಂದರಾಜ್‌ನಗರ ಶಾಸಕ ವಿ. ಸೋಮಣ್ಣ, ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ, ನಂಜನಗೂಡು ಶಾಸಕ ಹರ್ಷವರ್ಧನ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಹಿರಿಯೂರು ಶಾಸಕಿ ಆರ್. ಪೂರ್ಣಿಮಾ ಅವರನ್ನು ಸಂಪರ್ಕಿಸಲು ರಾಜ್ಯ ಕಾಂಗ್ರೆಸ್ ನಾಯಕರು ಪ್ರಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಆದರೆ, ಬಿಜೆಪಿಯ ಎಲ್ಲ ಶಾಸಕರು ಗುರುಗ್ರಾಮದಲ್ಲಿ ವಾಸ್ತವ್ಯ ಹೂಡಿರು ವುದರಿಂದ ಬೇರೆಯವರ ಸಂಪರ್ಕಕ್ಕೆ ಸಿಗದಂತೆ ಎಲ್ಲರ ಮೊಬೈಲ್ ಫೋನ್‌ಗಳನ್ನು ಸ್ವಿಚ್ಆಫ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮಂಗಳವಾರ ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಶಾಸಕರ ಸಂಪರ್ಕ ಸಾಧ್ಯವಾಗಿಲ್ಲ.
ಗೊಂದಲ: ಬುಧವಾರ ಸಂಜೆಯೊಳಗೆ ಶಾಸ ಕರನ್ನು ಬೆಂಗಳೂರಿಗೆ ಕರೆಯಿಸಿ ರೆಸಾರ್ಟ್‌ಗೆ ಕಳುಹಿಸಲು ತೀರ್ಮಾನಿಸಲಾಗಿದೆಯಾ ದರೂ ಎಲ್ಲ ಶಾಸಕರನ್ನು ಒಂದೆಡೆ ಸೇರಿಸಲು ಪ್ರಯತ್ನಿಸಿ ಕೆಲವು ಶಾಸಕರು ಆಗಮಿಸದೇ ಇದ್ದರೆ ನಾವೇ ಅಧಿಕೃತ ಸಂಖ್ಯೆ ಬಹಿರಂಗಪಡಿಸಿ ದಂತಾಗುತ್ತದೆ. ಅದರ ಬದಲು ಅವರ ಕ್ಷೇತ್ರದಲ್ಲಿಯೇ ಇದ್ದರೂ ಎಲ್ಲ ಶಾಸಕರ ಜತೆಗೆ ನಿರಂತರ ಸಂಪರ್ಕದಲ್ಲಿಟ್ಟು ಕೊಂಡು ಇರುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ. ಹೀಗಾಗಿ, ಬುಧವಾರ ಬೆಳಗ್ಗೆ ಈ ಬಗ್ಗೆ ಸ್ಪಷ್ಟ ನಿರ್ಧಾರವಾಗಲಿದೆ. ಜನವರಿ 18 ರಂದು ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಇರುವುದರಿಂದ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಜನವರಿ 16 ರಂದೇ ಎಲ್ಲ ಶಾಸಕರು ಬೆಂಗಳೂರಿಗೆ ಆಗಮಿಸುವಂತೆ ಸೂಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.