Advertisement
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ, ರಾಮ ಎಂದರೆ ಪ್ರೇಮ! ಅಸೂಯೆ ಇರುವ ಕಡೆ ಶ್ರೀ ರಾಮನು ಕಾಣಿಸಿಕೊಳ್ಳುವುದಿಲ್ಲ.
Related Articles
Advertisement
ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಸಂತೋಷದ ವಿಚಾರ. ಶ್ರೀರಾಮ ಬೋಧಿಸಿದ ಸಹಬಾಳ್ವೆಯ ತತ್ವ ಎಲ್ಲರಿಗೂ ಮಾದರಿಯಾಗಲಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಈ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ ಅಂತರ ಕಾಯ್ದುಕೊಂಡಿದ್ದಾರೆ.
ಸಂತಸದ ಕ್ಷಣ: ಎಚ್ಡಿಕೆಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು ಎಂಬ ಭಾರತೀಯ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿ ಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶ್ರೀರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾದುದು ಭಾವನಾತ್ಮಕ ಸನ್ನಿವೇಶ ಎಂಬುದು ನನ್ನ ಅನಿಸಿಕೆ. ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನ ಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ ಎಂದು ಹೇಳಿದ್ದಾರೆ.