Advertisement

ಆಸ್ಕರ್ ಫರ್ನಾಂಡಿಸ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕರು

02:36 PM Sep 16, 2021 | Team Udayavani |

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಇಂದು ಕಾಂಗ್ರೆಸ್ ನಾಯಕ, ರಾಜ್ಯ ಸಭೆ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು.

Advertisement

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಇರಿಸಲಾಗಿದ್ದ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

ಇದನ್ನೂ ಓದಿ:ನೀಲಿ ಸಿನಿಮಾ ನಿರ್ಮಾಣ ಪ್ರಕರಣ : ರಾಜ್ ಕುಂದ್ರಾ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡಿಸ್, ಪುತ್ರ ಓಶಾನ್ ಫರ್ನಾಂಡಿಸ್ ಅವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next