Advertisement
ಮೈಸೂರಿನಲ್ಲಿ, ಡಿಕೆ ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ 9 ಪ್ರಶ್ನೆಗಳನ್ನು ಕೇಳಿದರು.
- ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ವಂಚನೆ ಮಾಡಿದ್ದು ಯಾಕೆ ?
- ಯಾಕೆ ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿಯನ್ನು ಸಮರ್ಥಿಸಿಕೊಳ್ಳಲಿಲ್ಲ.
- ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿ ಕೇಸ್‌ಗೆ ಸಂಬಂಧಪಟ್ಟಂತೆ ಯಾಕೆ ಅಫಿಡೆವಿಟ್ ಸಲ್ಲಿಸಲಿಲ್ಲ ?
- ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಶಿಫಾರಸ್ಸನ್ನು ಮೋದಿ ಸರ್ಕಾರ ಮಾರ್ಚ್ 14ರಂದು ತಿರಸ್ಕರಿಸಿದ್ದು ಯಾಕೆ ?
- ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಯಾಕೆ ಸೇರಿಸಲಿಲ್ಲ ?
- ಎಸ್ಸಿ, ಎಸ್ಟಿ, ಒಬಿಸಿ, ಲಿಂಗಾಯತ, ಒಕ್ಕಲಿಗ ಮತ್ತು ಇತರೆ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಶೇ.50ರಷ್ಟು ಮೀಸಲಾತಿ ಮಿತಿಯನ್ನು ಯಾಕೆ ತೆಗೆದು ಹಾಕಲಿಲ್ಲ ?
- ಅಲ್ಪಸಂಖ್ಯಾತರ ಮೀಸಲಾತಿಯನ್ನು ಅನ್ಯಾಯವಾಗಿ ಟಾರ್ಗೆಟ್ ಮಾಡಿದ್ದು ಯಾಕೆ ?
- ಬಸವರಾಜ ಬೊಮ್ಮಾಯಿ ಸರ್ಕಾರ ತಮ್ಮದೇ ಸರ್ಕಾರದ ಹೇಳಿಕೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಸಮರ್ಥಿಸಿಕೊಳ್ಳಲಿಲ್ಲ ಯಾಕೆ ?
- ಮೀಸಲಾತಿ ವಿಚಾರದಲ್ಲಿ ಬಿಜೆಪಿ ಉಂಟು ಮಾಡಿದ ಗೊಂದಲಕ್ಕಾಗಿ ಮೋದಿ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತಾರಾ ? ಎಂದು ಪ್ರಶ್ನೆಗಳನ್ನು ಕೇಳಿದರು.
Related Articles
Advertisement
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ ? ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದರು.
ಎಂಎಲ್‌ಸಿ ದಿನೇಶ್ ಗೂಳಿಗೌಡ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಕ್ತಾರ ಎಂ.ಲಕ್ಷ್ಮಣ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.