Advertisement

ಕಾಂಗ್ರೆಸ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಖಂಡ್ರೆಯವರನ್ನು ವಶಕ್ಕೆ ಪಡೆದ ಪೊಲೀಸರು

05:40 PM Jul 27, 2020 | keerthan |

ಬೆಂಗಳೂರು: ರಾಜಸ್ತಾನ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಬಿಜೆಪಿಯೇತರ ಸರಕಾರಗಳನ್ನು ಕೆಡವುವ ಮೂಲಕ ಬಿಜೆಪಿಯಿಂದ ನಡೆಯುತ್ತಿರುವ ಪ್ರಜಾತಂತ್ರ ಹಾಗೂ ಸಂವಿಧಾನದ ಕಗ್ಗೊಲೆಯಾಗುತ್ತಿದ ಎಂದು ಪ್ರತಿಭಟಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು “ಪ್ರಜಾಪ್ರಭುತ್ವ ರಕ್ಷಿಸಿ-ಸಂವಿಧಾನ ರಕ್ಷಿಸಿ” ರಾಲಿ ನಡೆಸಿದರು.

Advertisement

ಆದರೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ಇಂಡಿಯನ್‌ ಎಕ್ಸ್‌ಪ್ರೆಸ್‌ ವೃತ್ತದಲ್ಲೇ ತಡೆದರು. ಅಲ್ಲಿಯೇ ಧರಣಿ ಆರಂಭಿಸಿದ ಮುಖಂಡರನ್ನು ಪೊಲೀಸರು ಬಂಧಿಸಿ, ಅಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದು, ನಂತರ ಬಿಡುಗಡೆ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಲು ಸಂಜೆ 4 ಗಂಟೆಗೆ ಸಮಯ ನಿಗದಿ ಆಗಿತ್ತು. ಆದರೆ ಪೊಲೀಸರು 4 ಗಂಟೆ ನಂತರ ಮುಖಂಡರನ್ನು ಬಿಡುಗಡೆ ಮಾಡಿದ್ದರಿಂದ ಇದು ಸಾಧ್ಯವಾಗಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next