Advertisement
ಮಂಡ್ಯ ಜಿಲ್ಲೆಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಮಾಡಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಿದ್ದರಾಮಯ್ಯ ಭಾನುವಾರ ಸಭೆ ನಡೆಸಿ, ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಪರವಾಗಿ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಹತ್ತು ತಿಂಗಳ ಮೈತ್ರಿ ಸರ್ಕಾರದಲ್ಲಿಮಂಡ್ಯದಲ್ಲಿ ಜೆಡಿಎಸ್‌ನವರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿಯಿಂದ ಅವರ ಮೇಲೆ ಪ್ರೀತಿ ತೋರಿಸಲು ಸಾಧ್ಯವೇ ಇಲ್ಲ. ನೀವು ಬಲವಂತದಿಂದ ಒಪ್ಪಿಸಿದರೂ, ಅಲ್ಲಿ ಇರುವ ಪರಿಸ್ಥಿತಿಯಲ್ಲಿ ಯಾರೂ ಅವರ ಪರವಾಗಿ ಕೆಲಸ ಮಾಡಲುಸಿದ್ದರಿಲ್ಲ ಎನ್ನುವ ಅಭಿಪ್ರಾಯವನ್ನು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ನಡೆಸಿದರು.
ಪರಿಸ್ಥಿತಿಯನ್ನು ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ಆದೇಶ ಪಾಲಿಸಲು ಸೂಚನೆ
ಮಂಡ್ಯ ನಾಯಕರ ಅಸಮಾಧಾನದ ನಡುವೆಯೂ ಸಿದ್ದ ರಾಮಯ್ಯ ಪಕ್ಷದ ದೇಶದಂತೆ ಎಲ್ಲರೂ ಕಡ್ಡಾಯವಾಗಿ ಮೈತ್ರಿ ಪಕ್ಷಗಳ ಅಭ್ಯರ್ಥಿ, ನಿಖೀಲ್ ಪರವಾಗಿ ಪ್ರಚಾರ ಮಾಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಮಂಡ್ಯದಲ್ಲಿ ಸಿದ್ದರಾಮಯ್ಯ ಪ್ರಚಾರ ಕೈಗೊಳ್ಳುವುದರಿಂದ ಎಲ್ಲರೂ ಜೊತೆಗಿರುವಂತೆಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿ ಕೂಡ ಮಂಡ್ಯ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಕೊಳ್ಳುವುದರಿಂದ ಯಾವುದೇ ಕಾರಣಕ್ಕೂ ಅವರಿಗೆ ಇರಿಸು ಮುರುಸು ಆಗದಂತೆ ನಡೆದುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
Related Articles
Advertisement
ಹಬ್ಬದ ಊಟ ಸವಿದ ಅತೃಪ್ತರು: ಮಂಡ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಸಿದ್ದರಾಮಯ್ಯ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರೂ, ಭಿನ್ನರು ತಮ್ಮ ನಿಲುವು ಸಡಿಸಿಲ್ಲ. ಇದರ ನಡುವೆಯೇ ಸಿದ್ದರಾಮಯ್ಯ ಭಿನ್ನರಿಗೆ ಹಬ್ಬದ ಅಡುಗೆ ಊಟ ಮಾಡಿಸಿ ಕಳುಹಿಸಿಕೊಟ್ಟಿದ್ದಾರೆ.ಸೋಮವಾರ ಮತ್ತೂಂದು ಸಭೆ ನಡೆಸುವುದಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.