ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಹೂಡುವ ತಂತ್ರಗಳಿಗೆ ಪ್ರತಿತಂತ್ರ ರೂಪಿಸುವ ಕುರಿತಂತೆ
ಚರ್ಚಿಸಲು ಬುಧವಾರ (ನ. 15) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.
ಸುವರ್ಣ ಸೌಧದ 3ನೇ ಮಹಡಿಯಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಪ್ರತಿಪಕ್ಷ ಬಿಜೆಪಿ, ಅಧಿವೇಶನದಲ್ಲಿ ಸಚಿವ ಜಾರ್ಜ್ ರಾಜೀನಾಮೆಗೆ ಪಟ್ಟು ಹಿಡಿದರೆ, ಬಿಜೆಪಿ ವಿರುದಟಛಿ ಪ್ರತ್ಯಸ್ತ್ರ ಬಳಸುವ ಕುರಿತು ಚರ್ಚಿಸುವ ಸಾಧ್ಯತೆಯಿದೆ.
ಮಂಗಳವಾರವೂ ಜಾರ್ಜ್ ರಾಜೀನಾಮೆಗೆ ಪಟ್ಟು ಹಿಡಿದು ಸದನದ ಒಳಗೆ ಪ್ರತಿಭಟನೆ ಮುಂದುವ ರಿಸಿ ದರೆ, ಅಕ್ರಮ ವಿದ್ಯುತ್ ಖರೀದಿ ಕುರಿತ ಸದನ ಸಮಿತಿ ವರದಿಯನ್ನು ಸದನದಲ್ಲಿ ಮಂಡಿಸಿ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡುವ ಕುರಿ ತಂತೆಯೂ ಸಭೆಯಲ್ಲಿ ಸಮಾಲೋಚನೆ ನಡೆ ಯುವ ಸಾಧ್ಯತೆಯಿದೆ.ಅಲ್ಲದೆ, ಅಕ್ರಮ ಗಣಿಗಾರಿಕೆ ಕುರಿತು ಸಂಪುಟ ಉಪ ಸಮಿತಿ ವರದಿ ನೀಡಿದ್ದು, ಅದನ್ನು ಎಸ್‌ಐಟಿಗೆ ವಹಿಸಿ ಬಿಜೆಪಿ ನಾಯಕರನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವ ಬಗ್ಗೆಯೂ ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ಹೆಣೆಯುವ ಸಾಧ್ಯತೆ ಇದೆ.