Advertisement

ವಿಧಾನಮಂಡಲ ಕಲಾಪ: ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

10:22 AM Sep 10, 2022 | Team Udayavani |

ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆ, ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ವಿಧಾನದ ಬಗ್ಗೆ ಚರ್ಚೆ ನಡೆಸಲು ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ‌ ಕರೆಯಲಾಗಿದೆ.

Advertisement

ಬೆಂಗಳೂರಿನ‌‌ ಖಾಸಗಿ ಹೊಟೇಲ್ ನಲ್ಲಿ ಸಂಜೆ 6.30ಕ್ಕೆ ಕರೆದಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಜತೆಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಯವರೂ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಕರಾವಳಿಯ ಕೆಲವೆಡೆ ಮಳೆ : ಉಡುಪಿ ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ

ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸಲಾಗುವುದು ಎಂದು ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಕಳೆದ ವರ್ಷ ಕಾಂಗ್ರೆಸ್ ಅಧಿವೇಶನದಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಈ ಹೋರಾಟಕ್ಕೆ ನಿರೀಕ್ಷಿತ ಬೆಂಬಲ ಸಿಕ್ಕಿರಲಿಲ್ಲ. ಆದರೆ ಕಳೆದ ಕೆಲ ತಿಂಗಳಿಂದ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಒಟ್ಟಾಗಿ ತಂತ್ರಗಾರಿಕೆ ನಡೆಸುತ್ತಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಇನ್ನಷ್ಟು ಸ್ಪಷ್ಟ ಚಿತ್ರಣ ಲಭಿಸಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next