Advertisement

ಜನತೆಯ ಸೇವೆಗಾಗಿ ಕಾಂಗ್ರೆಸ್ ಸೀಮಿತ: ಗೋವಾದಲ್ಲಿ ಪ್ರಿಯಾಂಕಾ ಗಾಂಧಿ

05:51 PM Dec 10, 2021 | Team Udayavani |

ಪಣಜಿ: ಗೋವಾದಲ್ಲಿ ಬಿಜೆಪಿ ಸರ್ಕಾರ ಜನತೆಗಾಗಿ ಕೆಲಸ ಮಾಡದೇ, ತಮ್ಮವರಿಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಚುನಾವಣೆಯಲ್ಲಿ ಜಯಗಳಿಸಿ ಮತ್ತೆ ಅಧಿಕಾರಕ್ಕೆ ಬರುವುದಕ್ಕಷ್ಟೇ ಬಿಜೆಪಿ ಸರ್ಕಾರ ಸೀಮಿತವಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.

Advertisement

ಶುಕ್ರವಾರ ಗೋವಾಕ್ಕೆ ಆಗಮಿಸಿದ ಅವರು ಮೋರ್ಪಿರ್ಲಾ ಗ್ರಾಮಕ್ಕೆ ಭೇಟಿ ನೀಡಿ ಬುಡಕಟ್ಟು ಜನಾಂಗದವರೊಂದಿಗೆ ಸಂವಾದ ನಡೆಸಿ ಸುದ್ಧಿಗಾರರೊಂದಿಗೆ ಮಾತನಾಡಿ, ಪ್ರಸಕ್ತ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಜನತೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪ್ರಪ್ರಥಮವಾಗಿ ಪೂರ್ಣಗೊಳಿಸಲಿದೆ. ಜನತೆಯ ಸೇವೆಗೆ ಕಾಂಗ್ರೆಸ್ ಸರ್ಕಾರ ಸೀಮಿತವಾಗಿರಲಿದೆ ಎಂದು ಹೇಳಿದರು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯಕ್ಕೆ ಆಮ್ ಆದ್ಮಿ ಪಕ್ಷ ಹೊಣೆಯಾಗಿದೆ ಎಂದು ಆರೋಪಿಸಿರುವ ಪ್ರಿಯಾಂಕಾ ಗಾಂಧಿ, ನೀವು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಹೋದಾಗ ಮೊದಲು ನಿಮ್ಮ ಬಗ್ಗೆ, ನಿಮ್ಮ ರಾಜ್ಯ ಮತ್ತು ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುವ ಪಕ್ಷಕ್ಕೆ ಮತ ನೀಡಿ ಎಂದು ಜನತೆಯ ಬಳಿ ಮನವಿ ಮಾಡಿದರು.

ಪರಿಸರ ಸಂರಕ್ಷಣೆಯೊಂದಿಗೆ ಸಮತೋಲನ ಸಾಧಿಸಿ ಅಭಿವೃದ್ಧಿ ಹೊಂದಬೇಕು. ನೀವು ನಿಮ್ಮ ಪರಿಸರ, ನೀರು, ಸಮುದ್ರ, ಕೃಷಿ ಉಳಿಸಬೇಕು. ನಿಮಗಾಗಿ ಕೆಲಸ ಮಾಡುವ ಪಕ್ಷ ಯಾವುದು ಎಂಬುದನ್ನು ನೀವು ಯೋಚಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾತ್ರ ಶೇ 30 ರಷ್ಟು ಉದ್ಯೋಗಗಳನ್ನು ಮೀಸಲಿಡುತ್ತದೆ. ನಿಮಗಾಗಿ ಕೆಲಸ ಮಾಡುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next