Advertisement

ಕಾಂಗ್ರೆಸ್‌ ಪಟ್ಟಿ ವಿಳಂಬ; ಬೆಂಬಲಿಗರಿಗೆ ಟಿಕೆಟ್‌ ಕೊಡಿಸಲು ನಾಯಕರ ಪಟ್ಟು

01:18 AM Nov 22, 2021 | Team Udayavani |

ಬೆಂಗಳೂರು: ಕಾಂಗ್ರೆಸ್‌ನ ಬಣ ಜಟಾಪಟಿಯಿಂದಾಗಿ ವಿಧಾನಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಮತ್ತು ಪಟ್ಟಿ ಬಿಡುಗಡೆಗೆ ವಿಳಂಬ ಉಂಟಾಗುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮಾಲೋಚನೆ ಮಾಡಿ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್‌ಗೆ ಈಗಾಗಲೇ ತಲುಪಿಸಿದ್ದಾರೆ. ಇದರ ಹೊರ ತಾಗಿಯೂ ಹಿರಿಯ ನಾಯಕರು ತಮ್ಮ ಬೆಂಬಲಿಗರಿಗೆ ಟಿಕೆಟ್‌ ಕೊಡಿಸಲು ಒತ್ತಡ ಹಾಕುತ್ತಿರುವುದರಿಂದ ಪಟ್ಟಿ ಬಿಡುಗಡೆ ತಡವಾಗುತ್ತಿದೆ ಎನ್ನಲಾಗಿದೆ.

Advertisement

ಕೆಲವು ಕ್ಷೇತ್ರ ಗಳಲ್ಲಿ ಹಾಲಿ ಸದಸ್ಯರು ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದು ಅಲ್ಲಿ ಸಮರ್ಥರು ಸಿಗುತ್ತಿಲ್ಲ. ಕೆಲವು ಕ್ಷೇತ್ರಗಳಲ್ಲಿ ಐದಾರು ಆಕಾಂಕ್ಷಿಗಳಿದ್ದು, ಒಮ್ಮತದ ಆಯ್ಕೆ ಕಷ್ಟವಾಗಿದೆ ಎನ್ನಲಾಗಿದೆ.

ಬಳ್ಳಾರಿ ಕ್ಷೇತ್ರದ ವಿಚಾರದಲ್ಲಿ ಹಾಲಿ ಸದಸ್ಯ ಕೊಂಡಯ್ಯ ಅವರಿಗೆ ಟಿಕೆಟ್‌ ಕೊಡಬೇಕು ಎಂಬುದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಒಲವು. ಮುಂಡರಗಿ ನಾಗರಾಜ್‌ ಅವರಿಗೆ ಟಿಕೆಟ್‌ ಕೊಡಬೇಕು ಎಂಬುದು ಕೆ.ಎಚ್‌. ಮುನಿಯಪ್ಪ ಮತ್ತು ರಾಜ್ಯಸಭೆ ಸದಸ್ಯ ಎಲ್‌. ಹನುಮಂತಯ್ಯ ಅವರ ಪಟ್ಟು. ಇಲ್ಲಿಯೂ ದಲಿತ ಸಮುದಾಯದ ಎಡ ಮತ್ತು ಬಲಕ್ಕೆ ಪ್ರಾತಿನಿಧ್ಯದ ಕೂಗು ಆರಂಭವಾಗಿದೆ.

ಕೋಲಾರದಲ್ಲಿ ಅನಿಲ್‌ಕುಮಾರ್‌ ಅವರಿಗೆ ಟಿಕೆಟ್‌ ಕೊಡಲು ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಅವರ ವಿರೋಧವಿದೆ. ಬ್ಯಾಲಹಳ್ಳಿ ಗೋವಿಂದಗೌಡ ಅವರಿಗೆ ಕೊಡಲು ಕೆಲವರು ಪರೋಕ್ಷ ತರಕಾರು ತೆಗೆದಿದ್ದಾರೆ ಎನ್ನಲಾಗಿದೆ. ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅವರನ್ನು ಸಹಮತದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಚಿಂತನೆ ನಡೆದಿತ್ತಾದರೂ ಜೆಡಿಎಸ್‌ನಿಂದ ಪ್ರಬಲ ಅಭ್ಯರ್ಥಿ ನಿಂತರೆ ಕಷ್ಟ ಎಂದು ಹಿಂದೇಟು ಹಾಕಲಾಗುತ್ತಿದೆ.

ಇದನ್ನೂ ಓದಿ:ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಯ ಅವಶ್ಯಕತೆಯಿಲ್ಲ : ಐಸಿಎಂಆರ್‌

Advertisement

ಈ ಮಧ್ಯೆ ಸಿ.ಆರ್‌. ಮನೋಹರ್‌ ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆ. ಆದರೆ ಅವರಿಗೆ ಟಿಕೆಟ್‌ ಕೊಡಲು ತೀವ್ರ ವಿರೋಧ ಇದೆ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ  ಬ್ಯಾಲ ಹಳ್ಳಿ ಗೋವಿಂದ ಗೌಡ ಅವ ರನ್ನು ಜೆಡಿಎಸ್‌ ನಾಯಕರು ಸಂಪರ್ಕ ಮಾಡಿದ್ದು, ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗದಿದ್ದರೆ ಜೆಡಿಎಸ್‌ನಿಂದ ಕಣಕ್ಕಿಳಿಸಲು ಕಾರ್ಯತಂತ್ರ ರೂಪಿಸಿದ್ದಾರೆ.

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿರುವ ಗೋವಿಂದಗೌಡ ಎರಡೂ ಜಿಲ್ಲೆಗಳಲ್ಲಿ ತಮ್ಮದೇ ಆದ ಪ್ರಾಬಲ್ಯ ಹೊಂದಿದ್ದು, ಜೆಡಿಎಸ್‌ನಿಂದ ಕಣಕ್ಕಿಳಿದರೆ ಕಾಂಗ್ರೆಸ್‌ಗೆ ಹಿನ್ನಡೆ ಯಾಗಬಹುದು ಎಂಬ ಆತಂಕವೂ ಎದುರಾಗಿದೆ. ಹೀಗಾಗಿ ಅಲ್ಲಿಯೂ ಅಂತಿಮವಾಗುತ್ತಿಲ್ಲ.
ವಿಜಯಪುರ, ಮೈಸೂರು, ದಕ್ಷಿಣ ಕನ್ನಡ, ಧಾರವಾಡ ಕ್ಷೇತ್ರಗಳಲ್ಲೂ ಅಭ್ಯರ್ಥಿ ಗಳ ಆಯ್ಕೆ ತಲೆನೋವಾಗಿದೆ. ಕೆಪಿಸಿಸಿ ಕಾರ್ಯಾ ಧ್ಯಕ್ಷ ಸಲೀಂ ಅಹಮದ್‌ ಅವರಿಗೆ ಧಾರವಾಡ ದಿಂದ ಟಿಕೆಟ್‌ ನೀಡಲು ವರಿಷ್ಠರು ಒಲವು ತೋರಿದ್ದು ಸ್ಥಳೀಯವಾಗಿ ಆಕಾಂಕ್ಷಿಗಳು ಹೆಚ್ಚಾಗಿರುವುದು ಕಗ್ಗಂಟಾಗಿದೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next