Advertisement

ಕಾಂಗ್ರೆಸ್‌ ಪಟ್ಟಿ ಬಿಡುಗಡೆ ಇಂದು?

06:10 AM Apr 13, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಕುರಿತಂತೆ(ಶುಕ್ರವಾರ) ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸುಮಾರು 140 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.

Advertisement

ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್‌ ಮಿಸ್ತ್ರಿ ನೇತೃತ್ವದ ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಜಾತಿ, ಪ್ರಾದೇಶಿಕತೆ, ಕ್ಷೇತ್ರವಾರು ಆಕಾಂಕ್ಷಿಗಳ ಸಾಮರ್ಥ್ಯ, ಗೆಲ್ಲುವ ಅವಕಾಶ ಪರಿಗಣಿಸಿ ಪಟ್ಟಿಯನ್ನು ಸಿದ್ಧಪಡಿಸಿದೆ. ಹಾಲಿ ಶಾಸಕರು, ಅನ್ಯ ಪಕ್ಷದಿಂದ ವಲಸೆ ಬಂದವರು ಹಾಗೂ ಯಾವುದೇ ಗೊಂದಲ ಇಲ್ಲದಿರುವ ಕ್ಷೇತ್ರಗಳು ಸೇರಿ ಸುಮಾರು 140 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದ್ದು, ಶುಕ್ರವಾರ ರಾತ್ರಿ ಅಥವಾ ಶನಿವಾರ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಪೂರ್ವಭಾವಿ ಸಭೆ: ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಗುರುವಾರ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಸ್ಕ್ರೀನಿಂಗ್‌ ಕಮಿಟಿ ಅಧ್ಯಕ್ಷ ಮಧುಸೂಧನ್‌ ಮಿಸ್ತ್ರಿ ಜೊತೆಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಸಭೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next