Advertisement

ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ…: ಕುಟುಕಿದ ಕಾಂಗ್ರೆಸ್

06:46 PM Apr 11, 2023 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ದೂರು ಸರಿಯುವ ನಿರ್ಧಾರ ಪ್ರಕಟಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

Advertisement

ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್.. ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ. “ನಾವೇ ಎಲ್ಲ” ಎನ್ನುತ್ತಿದ್ದವರಿಗೆ “ನೀವೇನೂ ಅಲ್ಲ” ಎನ್ನುತ್ತಿದೆ ಮೊ-ಶಾ ಜೋಡಿ. ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ ನೇರ ಕಸಾಯಿಖಾನೆಗೇ ಕಳಿಸುತ್ತಿರುವುದು ದುರಂತ ಎಂದು ಟ್ವೀಟಾಸ್ತ್ರ ಪ್ರಯೋಗಿಸಿದೆ.

ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು. ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈಶ್ವರಪ್ಪನವರ ರಾಜಕೀಯವನ್ನೇ ಮುಗಿಸಿಯಾಯ್ತು. ಜಗದೀಶ್ ಶೆಟ್ಟರ್ ಕಾಲವೂ ಸನ್ನಿಹಿತ. ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು! ಯಡಿಯೂರಪ್ಪ – ಔಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್, ಈಶ್ವರಪ್ಪ – ಔಟ್, ಜಗದೀಶ್ ಶೆಟ್ಟರ್ – ಔಟ್? ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಶಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ ಎಂದಿದೆ.

ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ ಆರ್ ಎಸ್ಎಸ್ ಗೆ ಅಪಥ್ಯವೇ. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next