Advertisement

ಕಾಂಗ್ರೆಸ್‌ ಪಾದಯಾತ್ರೆ ಕಾಮಿಡಿ ಶೋ ಇದ್ದಂತೆ

03:19 PM Oct 16, 2022 | Team Udayavani |

ತರೀಕೆರೆ: ಹಲವು ದಶಕಗಳ ಕಾಲ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಪಕ್ಷದಿಂದ, ದೇಶದ ಸಂಪತ್ತು ದೋಚಿದ ಮತ್ತು ದೇಶವನ್ನು ಇಬ್ಭಾಗ ಮಾಡಿದ ಕುಟುಂಬದವರು ದೇಶದಲ್ಲಿ ಭಾರತ್‌ ಜೋಡೋ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆ ಒಂದು ರೀತಿಯಲ್ಲಿ ಕಾಮಿಡಿ ಶೋ ಇದ್ದಂತೆ ಎಂದು ಶಾಸಕ ಡಿ.ಎಸ್‌.ಸುರೇಶ್‌ ಟೀಕಿಸಿದರು.

Advertisement

ಪಟ್ಟಣದ ಅರಮನೆ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪಾದಯಾತ್ರೆಯಲ್ಲಿ ಇ.ಡಿ. ವಿಚಾರಣೆಗೆ ಒಳಪಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಮೇಶ್‌ ಕುಮಾರ್‌ ಇನ್ನಿತರರು ಜೊತೆಯಾಗಿದ್ದಾರೆ. ಇಂತಹ ಪಾದಯಾತ್ರೆಯನ್ನು ಈ ದೇಶದ ಜನ ನೋಡಿಲ್ಲ. ಇದನ್ನು ನೋಡಿ ಅಳಬೇಕೋ ನಗಬೇಕೋ ಗೊತ್ತಾಗುತ್ತಿಲ್ಲ. ದೇಶದಲ್ಲಿ ಭಯೋತ್ಪಾದನೆ ಉಂಟು ಮಾಡುವ, ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸದಲ್ಲಿ ನಿರತರಾಗಿದ್ದ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರಕಾರ ನಿಷೇಧಿಸಿದರೆ ಕಾಂಗ್ರೆಸ್‌ ಇದನ್ನು ವಿರೋ ಧಿಸುತ್ತಿದೆ ಎಂದರು.

ನಮ್ಮ ಸರಕಾರದ ಅವಧಿಯಲ್ಲಿ ತರೀಕೆರೆ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ತರೀಕೆರೆ, ಕಡೂರು, ಚಿಕ್ಕಮಗಳೂರು ಕ್ಷೇತ್ರದ 200 ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಸರಕಾರ 1400 ಕೋಟಿ ಹಣ ಬಿಡುಗಡೆ ಮಾಡಿದೆ. ಈಗಾಗಲೇ ಶೇ. 70ರಷ್ಟು ಪೈಪ್‌ಲೈನ್‌ ಕಾಮಗಾರಿ ಮುಗಿದಿದೆ. ಐದಾರು ದಶಕಗಳ ಆಡಳಿತ ನಡೆಸಿದ ಪಕ್ಷ ಏಕೆ ಕೆರೆಗಳಿಗೆ ನೀರು ಹರಿಸುವ ಯೋಜನೆಯನ್ನು ರೂಪಿಸಲಿಲ್ಲ ಹಾಗೂ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಪ್ರಶ್ನಿಸಿದ ಅವರು 2008ಕ್ಕೂ ಪಟ್ಟಣಗಳಲ್ಲಿ ಮಾತ್ರ ಸಿಸಿ ರಸ್ತೆಯನ್ನು ನಿರ್ಮಾಣ ಮಾಡಿದ್ದವು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಗ್ರಾಮಗಳಲ್ಲಿಯೂ ಕಾಂಕ್ರೀಟ್‌ ರಸ್ತೆ ಮಾಡಲಾಗಿದೆ. ಇದು ಬಿಜೆಪಿ ಸರಕಾರದ ಸಾಧನೆ ಎಂದರು.

ಕಡೂರು, ತರೀಕೆರೆ ಮತ್ತು ಚಿಕ್ಕಮಗಳೂರಿನ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ನೀಡಬೇಕು ಎನ್ನುವ ಉದ್ದೇಶದಿಂದ 1200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಸರಕಾರ ಅನುಮೋದನೆ ನೀಡಿದೆ. ಭದ್ರಾ ಜಲಾಶಯದ ನದಿ ಪಾತ್ರದಿಂದ ಎಲ್ಲಾ ಗ್ರಾಮೀಣ ಭಾಗಗಳಿಗೂ ನೀರು ಹರಿಸಲಾಗುವುದು. ಯೋಜನೆಯ ಟೆಂಡರ್‌ ಪ್ರಕ್ರಿಯೆ ಅಂತಿಮಗೊಂಡಿದೆ. ನ.15 ರಂದು ಪಟ್ಟಣದಲ್ಲಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಲಿದ್ದಾರೆ. ಇದರ ಜೊತೆಯಲ್ಲಿ ಜಲಜೀವನ್‌ ಮಿಷನ್‌ ಕಾಮಗಾರಿ ಚಾಲನೆಯಲ್ಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಮೃದ್ಧ ಮಳೆ- ಬೆಳೆಯಾಗುತ್ತದೆ ಎಂಬುದು ಜನರಲ್ಲಿ ಮೂಡಿದ ಭಾವನೆಯಾಗಿದೆ ಎಂದರು.

Advertisement

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಜನರು ಬರಗಾಲ ಎದುರಿಸಿದ್ದರು. ಕುಡಿಯುವ ನೀರಿಗೂ ತತ್ವಾರವಾಗಿತ್ತು. ಭದ್ರಾ ನಾಲೆಯಿಂದ ರೈತರು ಟ್ಯಾಂಕರ್‌ಗಳ ಮೂಲಕ ನೀರು ತುಂಬಿಕೊಂಡು ಬೆಳೆದು ನಿಂತಿದ್ದ ಬೆಳೆಯನ್ನು ಉಳಿಸಿಕೊಳ್ಳಬೇಕಾಯಿತು. ಈ ಸಮಯದಲ್ಲಿ ಅಧಿಕಾರದಲ್ಲಿದ್ದ ಮಾಜಿ ಶಾಸಕ ಜಿ.ಎಚ್‌. ಶ್ರೀನಿವಾಸ್‌ ನಾಲೆಯಿಂದ ನೀರು ತರಲು ಅಡ್ಡಪಡಿಸಿದ್ದರು. ಜೊತೆಗೆ ಪೊಲೀಸರನ್ನು ಮುಂದೆ ಬಿಟ್ಟು ಪೊಲೀಸ್‌ ಅಧಿಕಾರಿಯಿಂದ ನನ್ನ ಕೊರಳು ಪಟ್ಟಿಗೆ ಕೈ ಹಾಕಿಸಿದ್ದರು. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು. ಇನ್ನು ಕೆಲವು ತಿಂಗಳಲ್ಲಿ ಚುನಾವಣೆ ಬರಲಿದೆ. ಬಿಜೆಪಿ ಸರಕಾರದ ಸಾಧನೆಯನ್ನು ಎಲ್ಲಾ ಜನರಿಗೂ ತಲುಪಿಸುವ ಕೆಲಸ ಮಾಡಬೇಕಿದೆ. ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ ಬಲಪಡಿಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಬಿಜೆಪಿ ಅದ್ಯಕ್ಷ ಕಲ್ಲುಮರಡಪ್ಪ, ನಮಗೆ ದೇಶ ಮೊದಲು ಎಂಬ ನಂಬಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದೇವೆ. ವ್ಯಕ್ತಿಗಿಂತ ಪಕ್ಷ ಮುಖ. ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದು ಬಿಜೆಪಿಯ ಸಿದ್ಧಾಂತ. ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನಕ್ಕೆ ಒತ್ತು ನೀಡಿದೆ ಎಂದರು.

ಸಭೆಯಲ್ಲಿ ಕಡೂರು ಶಾಸಕ ಬೆಳ್ಳಿಪ್ರಕಾಶ್‌, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌. ಜೀವರಾಜ್‌, ಬಿಜೆಪಿ ಮುಖಂಡರಾದ ಗಿರೀಶ್‌ ಪಟೇಲ್‌, ಚನ್ನಬಸಪ್ಪ, ಬಿ.ಕೆ. ಗಣೇಶ್‌ ರಾಯರು, ಕಾರ್ಯಕಾರಿಣಿ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next