Advertisement

ಯೋಜನೆ ಜಾರಿಗೆ ಒತ್ತಾಯಿಸಿ ‘ಮೇಕೆದಾಟು’ವಿನಿಂದ ಬೆಂಗಳೂರಿಗೆ ಕಾಂಗ್ರೆಸ್ ಪಾದಯಾತ್ರೆ

09:02 PM Nov 07, 2021 | Team Udayavani |

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ವರೆಗೆ
ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ಎಂದು ಭಾನುವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement

ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಗಳು

ನಮ್ಮ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ, ಯೋಜನಾ ವರದಿಯನ್ನು ಸಿದ್ಧಪಡಿಸಿತ್ತು. ಕೇಂದ್ರ
ಬಿಜೆಪಿ ಸರ್ಕಾರ ಅನುಮತಿ ನೀಡದ ಕಾರಣಕ್ಕೆ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ.

ಮೇಕೆದಾಟು ಯೋಜನೆ ಜಾರಿ ಮಾಡಲು ನಮ್ಮ ರಾಜ್ಯಕ್ಕೆ ಕಾನೂನಾತ್ಮಕ ಸೇರಿದಂತೆ ಎಲ್ಲ ರೀತಿಯ ಹಕ್ಕುಗಳಿವೆ. ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ಪರಿಸರ ಇಲಾಖೆಯು ಅನುಮತಿ ಪತ್ರ ನೀಡಬೇಕು ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯೋಜನೆ ಅನುಷ್ಠಾನಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ.

ಮೇಕೆದಾಟು ಯೋಜನೆ ಅನುಷ್ಠಾನವಾದ ಮೇಲೆ ಕೂಡ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ನ್ಯಾಯಾಲಯದ ಆದೇಶದ ಅನುಸಾರ ತಮಿಳುನಾಡಿನ ಪಾಲಿನ ನೀರನ್ನು ಅವರಿಗೆ ಬಿಡುತ್ತದೆ.ಹೀಗಿದ್ದಾಗ ನಮ್ಮ ರಾಜ್ಯದೊಳಗೆ ನಿರ್ಮಿಸಲು ಉದ್ದೇಶಿಸಿರುವ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ.

Advertisement

ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಸಮುದ್ರದ ಪಾಲಾಗುತ್ತಿರುವ ಹೆಚ್ಚುವರಿ ನೀರನ್ನು ನಾವು ಸದ್ಬಳಕೆ ಮಾಡಿಕೊಂಡರೆ ಅವರಿಗೇನು ತೊಂದರೆ? ತಮ್ಮ ಪಾಲಿನ ನೀರನ್ನು ಪಡೆಯುವುದಕ್ಕೆ ಮಾತ್ರ ತಮಿಳುನಾಡಿಗೆ ಹಕ್ಕಿರುವುದು.

Advertisement

Udayavani is now on Telegram. Click here to join our channel and stay updated with the latest news.

Next