Advertisement
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರು ದಿಲ್ಲಿಗೆ ತೆರಳಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ನಾಯಕರ ಜತೆ ಸೇರಿ ಪ್ರತಿಭ ಟನೆ ನಡೆಸಲು ನಿರ್ಧರಿಸಲಾಗಿದೆ. ಅಗ್ನಿಪಥ್ ಯೋಜನೆಯ ವಿರುದ್ಧವೂ ಈ ಸಂದರ್ಭದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ದಿಲ್ಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಸೋನಿಯಾ ಹಾಗೂ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡುವುದಕ್ಕಾಗಿಯೇ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಕೇಂದ್ರ ಸರಕಾರದ ಈ ನೀತಿ ಖಂಡಿಸಿ ದೇಶಾದ್ಯಂತ ಹೋರಾಟ ನಡೆಸಲಾಗುವುದು ಎಂದು ಹೇಳಿದರು.