Advertisement

Congress Meeting: ಸಿಎಂ ಸಿದ್ದರಾಮಯ್ಯ “ತ್ಯಾಗ’ದ ಮಾತು ಚರ್ಚೆಗೆ ಗ್ರಾಸ

02:31 AM Jan 14, 2025 | Team Udayavani |

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ವೈರಾಗ್ಯದ ಮಾತುಗಳನ್ನಾಡಿದ್ದರು. ಈಗ ಸಿಎಂ ಸಿದ್ದರಾಮಯ್ಯ “ಹುದ್ದೆ ತ್ಯಾಗ’ದ ಮಾತುಗಳನ್ನಾಡಿ ಊಹಾಪೋಹಕ್ಕೆ ಆಹಾರ ಒದಗಿಸಿದ್ದಾರೆ. ಅದರಲ್ಲೂ ಅಧಿಕಾರ ಹಸ್ತಾಂತರದ ಮಾತುಗಳು ಪಕ್ಷದಲ್ಲಿ ಬಲವಾಗಿ ಕೇಳಿಬರುತ್ತಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರು ಮಾತುಗಳು ಗಮನಸೆಳೆದಿವೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು.

ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್‌ ಸಿಂಗ್‌ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು. ಈ ತ್ಯಾಗದ ಮಾತುಗಳು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

Advertisement

Udayavani is now on Telegram. Click here to join our channel and stay updated with the latest news.