Advertisement

ದಿಢೀರ್‌ ಸಕ್ರಿಯರಾದ ಕಾಂಗ್ರೆಸ್‌ ಹಿರಿಯರು

06:56 PM Dec 02, 2019 | mahesh |

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಮತದಾನದ ದಿನ ಹತ್ತಿರವಾಗುತ್ತಿರುವಂತೆ ರಾಜ್ಯದ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಾಜಕೀಯ
ಲೆಕ್ಕಾಚಾರಗಳನ್ನು ಬದಲಾಯಿಸುವ ಸಾಧ್ಯತೆಯಿದ್ದು ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು
ಸಕ್ರಿಯರಾಗಿದ್ದಾರೆ.

Advertisement

ಹದಿನೈದು ಕ್ಷೇತ್ರಗಳ ಚುನಾವಣಾ ಫ‌ಲಿತಾಂಶ ರಾಜ್ಯ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ದು, ಹೆಚ್ಚು ಸ್ಥಾನ ಗೆದ್ದರೆ ಮತ್ತೆ ರಾಜ್ಯದಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಮರು ಮೈತ್ರಿಯಾಗುವ ಹೊಸ ಕನಸೊಂದು ಚಿಗುರೊಡೆಯುವಂತೆ ಮಾಡಿದೆ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸಿದ್ದರಾಮಯ್ಯ ಅವರ ಏಕಪಕ್ಷೀಯ ನಿರ್ಧಾರಗಳಿಂದ ಬೇಸತ್ತು ಚುನಾವಣಾ ಕಣದಿಂದಲೇ ಅಂತರ ಕಾಯ್ದುಕೊಂಡಿದ್ದ ಹಿರಿಯ ನಾಯಕರು ಈಗ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.

ಮಹಾರಾಷ್ಟ್ರ ಬೆಳವಣಿಗೆಯೇ ಸ್ಪೂರ್ತಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಮೈತ್ರಿಗೆ
ಸರ್ಕಾರ ರಚಿಸುವಷ್ಟು ಸ್ಪಷ್ಟ ಬಹುಮತ ಬಾರದಿದ್ದರೂ, ಶಿವಸೇನೆ ಹಾಗೂ ಬಿಜೆಪಿ ನಡುವಿನ ಮನಸ್ತಾಪದ ಪರಿಣಾಮ ಶಿವಸೇನೆ ಜೊತೆಗೆ ಮೈತ್ರಿ ಸರ್ಕಾರ ರಚಿಸುವ ಮೂಲಕ ಬಿಜೆಪಿಯವನ್ನು ಅಧಿಕಾರದಿಂದ ದೂರ ಇಟ್ಟಿರುವುದರಿಂದ ರಾಜ್ಯದಲ್ಲಿ ಜೆಡಿಎಸ್‌ ಜೊತೆಗೆ ಮತ್ತೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ.
ಅದೇ ಕಾರಣಕ್ಕೆ ರಾಜ್ಯದಲ್ಲಿಯೂ ಮತ್ತೆ ಮೈತ್ರಿಯ ಚರ್ಚೆಗಳು ಪ್ರಾರಂಭವಾಗಿವೆ. ಹೀಗಾಗಿ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ, ಎಂ.ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್‌ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ. ಕೊನೆಯ ಮೂರು ದಿನ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಆರಂಭದಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಏಕಪಕ್ಷೀಯವಾಗಿ ತೆಗೆದುಕೊಂಡ ನಿರ್ಧಾರಗಳಿಂದ ಬೇಸತ್ತು ಅವರೇ ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲಿಸಿಕೊಂಡು ಬರಲಿ ಎಂದು ದೂರ ಉಳಿದಿದ್ದ ಹಿರಿಯ ನಾಯಕರು, ಈಗ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಹೇಳಿಕೆಗಳಿಂದ ಮತ್ತೆ ಮೈತ್ರಿ ಸಾಧ್ಯತೆಯನ್ನು ಅರಿತಿದ್ದಾರೆ. ಹೀಗಾಗಿ, ಹಿರಿಯ
ನಾಯಕರು ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ತಮ್ಮ ಶ್ರಮವನ್ನೂ ಸೇರಿಸುವ ಯತ್ನ ನಡೆಸಿದ್ದಾರೆ
ಎನ್ನಲಾಗುತ್ತಿದೆ.

ಗೆಲುವಿಗೆ ಸಹಕಾರ ತತ್ವ: ಹಾಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಕೆಲವು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗುವಂತೆ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿಯನ್ನು ಏಕಾಂಗಿಯಾಗಿ ಸೋಲಿಸಲು ಕಷ್ಟವಾಗಬಹುದು ಎಂದು ಅರಿತಿರುವ ಎರಡೂ ಪಕ್ಷಗಳ ನಾಯಕರು ಹುಣಸೂರು, ಕೆ.ಆರ್‌.ಪೇಟೆ, ಯಶವಂತಪುರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಅಥಣಿ, ಕಾಗವಾಡ, ರಾಣೆಬೆನ್ನೂರು, ಹೀರೆಕೆರೂರು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ತತ್ವ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Advertisement

ಹುಣಸೂರು ಹಾಗೂ ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪ್ರಬಲವಾಗಿದ್ದರೂ, ಅನರ್ಹ ಶಾಸಕರನ್ನು ಗೆಲ್ಲಿಸಿಕೊಳ್ಳುವ ಮೂಲಕ ಬಿಜೆಪಿ ತನ್ನ ಖಾತೆ ತೆರೆಯಲು ಪ್ರಯತ್ನ ನಡೆಸುತ್ತಿದೆ. ಹೀಗಾಗಿ,
ಹುಣಸೂರಿನಲ್ಲಿ ಕಾಂಗ್ರೆಸ್‌ಗೂ, ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್‌ಗೆ ಎರಡೂ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ತತ್ವ ಅನುಸರಿಸಿ ಎರಡೂ ಕ್ಷೇತ್ರಗಳಲ್ಲಿ ಅನರ್ಹರನ್ನು ಸೋಲಿಸುವ ಮೂಲಕ ಆಡಳಿತ ಪಕ್ಷಕ್ಕೆ ಶಾಕ್‌ ನೀಡುವ ಲೆಕ್ಕಾಚಾರ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಬೆಂಗಳೂರಿನ ಯಶವಂತಪುರದಲ್ಲಿ ಜೆಡಿಎಸ್‌ಗೆ, ಕೆ.ಆರ್‌.ಪುರದಲ್ಲಿ ಕಾಂಗ್ರೆಸ್‌ಗೆ ಪರಸ್ಪರ ಸಹಕಾರ ತತ್ವ ಪಾಲನೆಯ ತಂತ್ರ ಅನುಸರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯಗೆ ಗೊಂದಲ
ಪಕ್ಷದಲ್ಲಿನ ಗೊಂದಲಗಳಿಂದ ‌ ಮುನಿಸಿಕೊಂಡು ಅಂತರ ಕಾಯ್ದುಕೊಂಡಿದ್ದ ಹಿರಿಯಕರು ಮೈತ್ರಿ ಕನಸಿದಿಗೆ ಮತ್ತೆ ಸಕ್ರಿಯವಾಗಿ ರುವುದು ಸಿದ್ದರಾಮಯ್ಯಅವರಿಗೆ ಗೊಂ‌ಲ ಮಾಡಿದೆ ಎನ್ನಲಾಗುತ್ತಿದೆ. ಯಾವುದೇ ಕಾರಣಕ್ಕೂ ಜೆಡಿಎಸ್‌ ಜೊತೆ ಮತ್ತೆ ಮೈತಿಇಲ್ಲ ಎಂದು ಬಹಿರಂಗವಾಗಿಯೇ ಸಿದ್ದರಾಮಯ್ಯ
ಹೇಳುತ್ತಿರೂ, ಮೂಲ ಕಾಂಗ್ರೆಸ್ಸಿಗರು ಮಹಾರಾಷ್ಟ್ರದ ಬೆಳವಣಿಗೆಯಿಂದ ಪ್ರೇರೆಪಿತರಾಗಿ ಮತ್ತೆ ಮೈತ್ರಿಯ ಮಾತನಾಡುತ್ತಿರುವುದು ಹಾಗೂ ‌ಕ್ಕೆ ಪೂರಕವಾಗಿ ಸಹಕಾರ ತತ್ವ ಅನುಸರಿಸುತ್ತಿರುವುದು
ಸಿದ್ದರಾಮಯ್ಯ ಅವರನ್ನು ಗೊಂದಲಕ್ಕೀಡು ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಂಕರ ಪಾಗೋಜಿ

Advertisement

Udayavani is now on Telegram. Click here to join our channel and stay updated with the latest news.

Next