Advertisement
ಪ್ರಕರಣದ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಗುರುವಾರ ಸಚಿವ ಡಿ.ಕೆ.ಶಿವಕುಮಾರ್, ಉದ್ಯಮಿ ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಮತ್ತು ರಾಜೇಂದ್ರ ಅವರುಗಳಿಗೆ ತಲಾ 50 ಸಾವಿರ ಬಾಂಡ್ ಶ್ಯೂರಿಟಿ ನೀಡುವಂತೆ ಸೂಚಿಸಿ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಸೆ.20ಕ್ಕೆ ವಿಚಾರಣೆ ಮುಂದೂಡಿದೆ.
Related Articles
Advertisement
ವಾದ ಆಲಿಸಿದ ನ್ಯಾ ಎಂ.ಎಸ್.ಆಳ್ವಾ, ಶಿವಕುಮಾರ್ ಸೇರಿ ಐವರು ಆರೋಪಿಗಳಿಗೆ ತಲಾ 50 ಸಾವಿರ ಬಾಂಡ್ ನೀಡುವಂತೆ ಷರತ್ತು ವಿಧಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದರು. ಇದೇ ವೇಳೆ ಮುಂದಿನ ವಿಚಾರಣೆ ವೇಳೆಗೆ ಹೈಕೋರ್ಟ್‌ನ ಅರ್ಜಿಯ ವಸ್ತುಸ್ಥಿತಿ ತಿಳಿಸುವಂತೆ ಆದೇಶಿಸಿ ಸೆ.20ಕ್ಕೆ ವಿಚಾರಣೆ ಮುಂದೂಡಿದರು.
2017ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ತಮ್ಮ ಆದಾಯ ಕುರಿತು ಮಾಹಿತಿ ನೀಡಲು ಐಟಿ ಅಧಿಕಾರಿಗಳು ಶಿವಕುಮಾರ್‌ಗೆ ಸಮನ್ಸ್ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾದ ಶಿವಕುಮಾರ್ ಹಾಗೂ ಇತರರು ಸುಳ್ಳು ಮಾಹಿತಿ ನೀಡಿರುವುದು ಕಂಡು ಬಂದಿದೆ. ಸಚಿವರು ವಿಚಾರಣೆ ಸಂದರ್ಭದಲ್ಲಿ ನೀಡಿರುವ ಹೇಳಿಕೆಗೂ, ಅವರ ಮನೆ ಮತ್ತು ಕಚೇರಿಗಳಲ್ಲಿ ಪತ್ತೆಯಾದ ದಾಖಲೆಗಳು ತಾಳೆ ಆಗುತ್ತಿಲ್ಲ. ಈ ಮೂಲಕ ಸುಳ್ಳು ಮಾಹಿತಿ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದು, ಕೆಲ ಸಾಕ್ಷ್ಯಾಗಳನ್ನು ನಾಶ ಪಡಿಸಿದ್ದಾರೆ ಎಂದು ಆರೋಪಿಸಿರುವ ಐಟಿ ಅಧಿಕಾರಿಗಳು ಐಟಿ ಕಾಯ್ದೆ 277, 278, 193, 199, ಹಾಗೂ 120(ಬಿ) ಸೆಕ್ಷನ್‌ಗಳ ಅಡಿ ದೂರು ದಾಖಲಿಸಿದ್ದರು.
ನಾಲ್ಕು ಪ್ರಕರಣಗಳಲ್ಲೂ ರಿಲೀಫ್ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಚಿವ ಶಿವಕುಮಾರ್ ಹಾಗೂ ಇತರರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಎರಡು ಆರ್ಥಿಕ ವರ್ಷಗಳಲ್ಲಿ ತೆರಿಗೆ ವಂಚನೆ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು, 3ನೇ ಪ್ರಕರಣ ತಮ್ಮ ಸಂಪೂರ್ಣ ವ್ಯವಹಾರದಲ್ಲಿ ತೆರಿಗೆ ಕುರಿತು ತಪ್ಪು ಮಾಹಿತಿ ನೀಡಿದ ಆರೋಪ. ಹಾಗೂ ಹವಾಲಾ ವ್ಯವಹಾರ ಮತ್ತು ಸುಳ್ಳು ಮಾಹಿತಿ ಹಾಗೂ ಸಾûಾ$Â ನಾಶ ಆರೋಪದಡಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಇದೀಗ ಎಲ್ಲ ಪ್ರಕರಣಗಳಲ್ಲಿಯೂ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.