Advertisement

Congress MLA; ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ: ಸಿಎಂಗೆ ಟಿ.ರಘುಮೂರ್ತಿ ಪತ್ರ

05:33 PM Jan 11, 2024 | Team Udayavani |

ಚಿತ್ರದುರ್ಗ: ನಾನು ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

Advertisement

ನಿಗಮ ಮಂಡಳಿ ಪಟ್ಟಿ ಪ್ರಕಟಿಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಪತ್ರ ಬರೆದಿದ್ದು, ”ನನ್ನನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ. ಕಾಂಗ್ರೆಸ್ ಪಕ್ಷ 3 ಬಾರಿ ಸ್ಪರ್ಧೆಗೆ ಅವಕಾಶ ನೀಡಿದೆ.ವರಿಷ್ಠರಿಗೆ, ಕಾರ್ಯಕರ್ತರಿಗೆ ನಾನು ಋಣಿಯಾಗಿರುವೆ.ನಾನು ಸರಕಾರದಿಂದ ಸಹಕಾರ ನಿರೀಕ್ಷಿಸುವೆ, ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ.ಯಾವುದೇ ಸಮಯದಲ್ಲಿ ಪಕ್ಷಕ್ಕೆ ಮುಜುಗರ ಆಗದ ರೀತಿ ನಡೆದುಕೊಳ್ಳುವೆ” ಎಂದು ಬರೆದಿದ್ದಾರೆ.

ಒಂದೆಡೆ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ವೇಳೆಯಲ್ಲಿ ರಘುಮೂರ್ತಿ ನನಗೆ ಬೇಡ ಎಂದು ಪತ್ರ ಬರೆದು ಗಮನಸೆಳೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next