ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು, ವೈದ್ಯರ ಸಲಹೆ ಮೇರೆಗೆ 1 ವಾರ ಕಾಲ ಹೋಂ ಕ್ವಾರಂಟೈನ್ ಆಗಿದ್ದಾರೆ.
ಮತದಾರರ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಶೀಘ್ರ ಗುಣಮುಖನಾಗಿ ಮತ್ತೆ ಕ್ಷೇತ್ರದ ಹಾಗೂ ಜನರ ಸೇವೆಗೆ ಹಿಂದಿರುಗುತ್ತೇನೆ. ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಮನವಿ ಮಾಡಿದ್ದಾರೆ.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿಯೂ ಪ್ರಸಾದ ಅಬ್ಬಯ್ಯ ಅವರು, ಕೊರೊನಾ ಸೋಂಕಿಗೆ ಒಳಗಾಗಿ, ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.