Advertisement
ಜಿಂದಾಲ್ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಗೆ ಅನ್ಯಾಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಆನಂದ್ ಸಿಂಗ್ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದರು. ಇದೀಗ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕೂಡಾ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
Related Articles
Advertisement
ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ಕೊಡುತ್ತಿದ್ದಂತೆಯೇ ಸಮನ್ವಯ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಡನೆ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದು, ಸರ್ಕಾರ ಉಳಿಸಿಕೊಳ್ಳುವ ಕುರಿತು ಸಮಾಲೋಚನೆ ನಡೆಸಿರುವುದಾಗಿ ವರದಿ ತಿಳಿಸಿದೆ.