Advertisement

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

07:42 PM Dec 07, 2021 | Team Udayavani |

ಪಣಜಿ: ಗೋವಾ ಮಾಜಿಮುಖ್ಯಮಂತ್ರಿ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರವಿ ನಾಯ್ಕ್ ಮಂಗಳವಾರ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಮಂಗಳವಾರ ಶಾಸಕ ರವಿ ನಾಯ್ಕ್ ರವರು ಗೋವಾ ವಿಧಾನಸಭೆಯ ಸಭಾಪತಿ ರಾಜೇಶ್ ಪಾಟ್ನೇಕರ್ ರವರಿಗೆ ರಾಜೀನಾಮೆ ಸಲ್ಲಿಸಿದರು.

ಮಂಗಳವಾರ(7 ಡಿಸೆಂಬರ್) ಸಂಜೆ ಪೊಂಡಾದಲ್ಲಿ ನಡೆಯಲಿರುವ  ಅದ್ಧೂರಿ ಸಮಾರಂಭದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರಿಂದಾಗಿ ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರ ಸಂಖ್ಯೆ 3 ಕ್ಕೆ ಇಳಿಕೆಯಾದಂತಾಗಿದೆ.

ಈ ಕುರಿತು ಮಾಧ್ಯಮ ವರದಿಗಾರರಿಗೆ ಪ್ರತಿಕ್ರಿಯೆ ನೀಡಿದ ಶಾಸಕ ರವಿ ನಾಯ್ಕ- ನಾನು ಕಾಂಗ್ರೇಸ್ ಪಕ್ಷದ ಶಾಸಕ ಸ್ಥಾನಕ್ಕೆ ಇಂದು ಸಭಾಪತಿಗಳ ಬಳಿ ರಾಜೀನಾಮೆ ಸಲ್ಲಿಸಿದ್ದೇನೆ. ನಾನು ಬಿಜೆಪಿ ಪಕ್ಷ ಸೇರುತ್ತಿದ್ದೇನೆ. ನಾನು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next