Advertisement
ಇದರ ಬೆನ್ನಲ್ಲೇ ಸ್ಥಳದಲ್ಲಿದ್ದ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್, ಬೇಲೆಕೇರಿ ಬಂದರಿನ ಉಪ ಸಂರಕ್ಷಣಾ ಧಿಕಾರಿ (ಡೆಪ್ಯುಟಿ ಪೋರ್ಟ್ ಕನ್ಸರ್ವೇಟರ್) ಮಹೇಶ್ ಬಿಳಿಯ, ಲಾಲ್ ಮಹಲ್ ಕಂಪೆನಿಯ ಮಾಲಕ ಪ್ರೇಮ್ ಚಂದ್ ಗರ್ಗ್, ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲಕ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪೆನಿಯ ಮಾಲಕ ಕೆ.ವಿ. ನಾಗರಾಜ್, ಗೋವಿಂದರಾಜು, ಆಶಾಪುರ ಕಂಪೆನಿಯ ಮಾಲಕ ಚೇತನ್ ಅವರನ್ನು ವಶಕ್ಕೆ ಪಡೆದುಕೊಂಡು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಿದರು.
ಆರೋಪಿಗಳ ಶಿಕ್ಷೆಯ ಪ್ರಮಾಣದ ತೀರ್ಪನ್ನು ಅ. 25ಕ್ಕೆ ಕೋರ್ಟ್ ಕಾಯ್ದಿರಿಸಿದೆ. ಒಂದು ವೇಳೆ ಆರೋಪಿಗಳಿಗೆ 3 ವರ್ಷದ ಒಳಪಟ್ಟು ಶಿಕ್ಷೆ ಘೋಷಣೆ ಮಾಡಿದರೆ ಜಾಮೀನು ಸಿಗುವ ಸಾಧ್ಯತೆ ಇದೆ. ಅದಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಿದರೆ ಆರೋಪಿಗಳನ್ನು ಮತ್ತೆ ಜೈಲಿಗೆ ಕಳುಹಿಸಲಾಗುತ್ತದೆ.
Related Articles
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಈಗ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಿರುವ ಕೋರ್ಟ್ ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಆರೋಪಿಗಳು ದೋಷಿ ಎಂದು ಹೇಳಿದೆ. ಈ ಪ್ರಕರಣದಲ್ಲಿ ಆರೋ ಪಿ ಯಾ ಗಿದ್ದ ಐಎಲ್‌ಸಿ ಕಂಪೆನಿಯ ಮಾಲಕ ಸೋಮಶೇಖರ್ ಈಗಾ ಗಲೇ ನಿಧನ ಹೊಂದಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ಪರವಾಗಿ ಸರಕಾರದ ಹಿರಿಯ ಅಭಿಯೋಜಕರಾದ ಕೆ.ಎಸ್. ಹೇಮಾ ಮತ್ತು ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.
Advertisement
ಏನಿದು ಪ್ರಕರಣ?ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 200 ಕೋಟಿ ರೂ.ಗ ಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿ ರ ನ್ನು ಬೇಲೆಕೇರಿ ಬಂದರಿನ ಅಧಿ ಕಾ ರಿ ಮಹೇಶ್ ಬಿಳಿಯ ಅವರ ಸುಪ ರ್ದಿ ಗೆ ನೀಡಿದ್ದರು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಜಪ್ತಿ ಮಾಡಿದ ಅದಿರನ್ನು ಸತೀಶ್ ಸೈಲ್‌ಗೆ ಕಡಿಮೆ ಮೊತ್ತಕ್ಕೆ ಅಕ್ರಮವಾಗಿ ಮಾರಾಟ ಮಾಡಿದ್ದರು. ಇನ್ನು ಕೆಲವರು ನೇರವಾಗಿ ವಿದೇಶಕ್ಕೆ ರಫ್ತು ಮಾಡಿದ್ದರು. ಸತೀಶ್ ಸೈಲ್ ಪ್ರತ್ಯೇಕವಾಗಿ ತಮ್ಮ ಪಿಜಿಎಸ್ ಕಂಪೆನಿ, ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ.ಲಿ. ಹಾಗೂ ಇತರ ಕಂಪೆನಿಗಳ ಮೂಲಕ ಅದಿರನ್ನು ವಿದೇಶಕ್ಕೆ ರಫ್ತು ಮಾಡಿದ್ದರು ಎನ್ನಲಾಗಿದೆ. ಈ ಮಾಹಿತಿ ಮೇರೆಗೆ ಕರ್ನಾಟಕ ಲೋಕಾಯುಕ್ತದ ಅಂದಿನ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖೆ ನಡೆದಿತ್ತು.