ಬೆಂಗಳೂರು: ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯಕ್ ಐಎಎಸ್ ಅಧಿಕಾರಿ ವಾಣಿಜ್ಯ ಮತ್ತು ಕೈಗಾರಿಕಾ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಧಮ್ಕಿ ಹಾಕಿರುವ ಬಗ್ಗೆ ವರದಿಯಾಗಿದೆ.
ಮಾಧ್ಯಮಗಳು ಕಚೇರಿಗೆ ತೆರಳಿ ಕಟಾರಿಯಾ ಅವರನ್ನು ಪ್ರಶ್ನಿಸಲು ಮುಂದಾದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಕೇವಲ ಕೈಮುಗಿದು ಕಚೇರಿಯೊಳಗೆ ತೆರಳಿದ್ದಾರೆ.
ಮಗನ ಗಣಿ ಸಂಬಂಧಿತ ಕೆಲಸ ಮಾಡಿಕೊಡು ಇಲ್ಲದಿದ್ದರೆ ನೋಡಿಕೊಳ್ಳುತ್ತೇನೆ ಎಂದು ಧಮ್ಕಿ ಹಾಕಿರುವುದಾಗಿ ಕುಂಟಿಯಾ ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ‘ನನಗೆ ಯಾವುದೇ ದೂರು ನೀಡಿಲ್ಲ, ಶಾಸಕರಾದವರು ಆ ರೀತಿ ವರ್ತಿಸಿದರೆ ಅದು ಸರಿಯಲ್ಲ’ ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಪ್ರತಿಕ್ರಿಯೆ ನೀಡಿ ‘ಇದೊಂದು ಗಂಭೀರ ಸ್ವರೂಪದ ಪ್ರಕರಣ. ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಯಾರೂ ಮಾಡಬಾರದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ’ ಎಂದರು.
ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆಗೆ ಯತ್ನಿಸಿದ ಕುರಿತು ಶಾಸಕ ಶಿವಮೂರ್ತಿ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿತ್ತು.