Advertisement

ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ಗೆ ಗುಡ್ ಬೈ, BJP ಸೇರ್ಪಡೆ ಸಾಧ್ಯತೆ

04:46 AM Mar 04, 2019 | Sharanya Alva |

ಬೆಂಗಳೂರು: ಸಚಿವ ಸ್ಥಾನ ನೀಡದೆ ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದ ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಕೋಲಾರದ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಇರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕ ತೆರಳಿ ಜಾಧವ್ ರಾಜೀನಾಮೆ ಪತ್ರ ಕೊಟ್ಟಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜಾಧವ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಲ್ಲದೇ ಅತೃಪ್ತರ ಗುಂಪಿನಲ್ಲಿಯೂ ಕಾಣಿಸಿಕೊಂಡಿದ್ದ ಜಾಧವ್ ಅವರು ತಮ್ಮ ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ್ದರು.

ಕಲಬುರಗಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನ ಏಳಿಗೆಗಾಗಿ ತನ್ನನ್ನು ತುಳಿಯುತ್ತಿದ್ದಾರೆ ಎಂದು ಜಾಧವ್ ಈ ಹಿಂದೆ ಆರೋಪಿಸಿದ್ದರು. ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next