Advertisement

“ಟಾರ್ಗೆಟ್‌ ಬೆಂಗಳೂರು’ಗೆ ಕಾಂಗ್ರೆಸ್‌ ಶಾಸಕರ ಸಭೆ

07:30 AM Sep 15, 2017 | Team Udayavani |

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಅವರು ಶುಕ್ರವಾರದಿಂದ ಮತ್ತೆ ಮೂರು ದಿನ ಪಕ್ಷ ಸಂಘಟನೆ ಕುರಿತಂತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

Advertisement

ಈಗಾಗಲೇ ಪ್ರತಿ ಹದಿನೈದು ದಿನಕ್ಕೊಮ್ಮೆ ಸಭೆಗಳನ್ನು ನಡೆಸಿ ಪಕ್ಷದ ಮುಖಂಡರನ್ನು ನಿರಂತರ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಿರುವ ವೇಣುಗೋಪಾಲ, ಶುಕ್ರವಾರ ಬೆಂಗಳೂರು ನಗರ ಶಾಸಕರು ಮತ್ತು 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಸಮಬಲದ ಶಾಸಕರನ್ನು ಹೊಂದಿದೆ. ಹೀಗಾಗಿ, ಕಳೆದ ಬಾರಿಯ
ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಗೆಲುವು ಪಡೆಯುವುದರ ಜತೆಗೆ ಹಾಲಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳಲು
ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಬೆಂಗಳೂರು ಅಭಿವೃದಿಟಛಿಗೆ
ನೀಡಿರುವ ಯೋಜನೆಗಳು ಮತ್ತು ಇಂದಿರಾ ಕ್ಯಾಂಟೀನ್‌ ಆರಂಭದ ಕುರಿತು ಜನತೆಗೆ ಮನವರಿಕೆ ಮಾಡಿಕೊಡಲು ಶಾಸಕರು ಕಾರ್ಯಕ್ರಮಗಳನ್ನು ರೂಪಿಸಲು ವೇಣುಗೋಪಾಲ ಸಲಹೆ ನೀಡುವ ಸಾಧ್ಯತೆ ಇದೆ.

ಅಲ್ಲದೆ, ಸೆ. 23ರಂದು ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ “ಮನೆ, ಮನೆಗೂ ಕಾಂಗ್ರೆಸ್‌’ ಕಾರ್ಯಕ್ರಮ ಉದ್ಘಾಟನೆ ಮಾಡಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಶಾಸಕರು ಶ್ರಮಿಸುವಂತೆ ವೇಣುಗೋಪಾಲ ಸೂಚಿಸುವ ಸಾಧ್ಯತೆ ಇದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಸೆ.16ರಂದು ಹೆಚ್ಚು ಪ್ರಚಲಿತವಿರುವ ಸಾಮಾಜಿಕ ಜಾಲತಾಣ ಮತ್ತು ಐಟಿ ಸೆಲ್ ಗಳೊಂದಿಗೆ ವೇಣುಗೋಪಾಲ ವಿಶೇಷ ಸಭೆ
ನಡೆಸಲಿದ್ದಾರೆ. ಐಟಿ ಸೆಲ್‌ ಮೂಲಕ ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಬಳಸಿಕೊಂಡು ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ವೈಫ‌ಲ್ಯಗಳ ಬಗ್ಗೆ ಜನರಿಗೆ ತಲುಪಿಸುವ ಕುರಿತು ಐಟಿ ಸೆಲ್‌ ಮತ್ತು ಸಾಮಾಜಿಕ ಜಾಲತಾಣ ನಿರ್ವಹಿಸುವ ತಂಡಕ್ಕೆಸೂಚನೆ ನೀಡುವ ಸಾಧ್ಯತೆಯೂ ಇದೆ.

Advertisement

ಸೆ.17ರಂದು ಯಾವುದೇ ಅಧಿಕೃತ ಕಾರ್ಯಕ್ರಮಗಳನ್ನು ಹಾಕಿಕೊಳ್ಳದ ವೇಣುಗೋಪಾಲ, ಸೆ.18ರಂದು ಪಕ್ಷದ ಜಿಲ್ಲಾಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಮತ್ತು ಮುಂಚೂಣಿ ಘಟಕದ ಅಧ್ಯಕ್ಷರೊಂದಿಗೆ ಸಭೆ ನಡೆಸಲಿದ್ದಾರೆ. ಈಗಾಗಲೇ ಬೂತ್‌ಮಟ್ಟದ ಕಾರ್ಯಕರ್ತರ ಸಮಿತಿ ನೇಮಿಸುವಂತೆ ನೀಡಿರುವ ಗಡುವನ್ನು ಎರಡು ಬಾರಿ ಮುಂದೂಡಲಾಗಿದ್ದು, ಸರಿಯಾಗಿ ಕಾರ್ಯ ನಿರ್ವಹಿಸದವರನ್ನು ಹುದ್ದೆಯಿಂದ ಕೈ ಬಿಡುವ ಎಚ್ಚರಿಕೆಯನ್ನೂ ನೀಡಿದ್ದರು. ಹೀಗಾಗಿ, ಸೆ.18ರಂದು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ Êು‌ ತ್ತೂಂದು ಸಭೆ ಕರೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next