Advertisement
ಜತೆಗೆ ಹಾಸನ ಜಿಲ್ಲೆಯ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿಯವರು ಸಂಸದೀಯ ಕಾರ್ಯದರ್ಶಿಯಾಗಿ ನೇಮಿಸುವುದು ರೇವಣ್ಣ ಅವರಿಗೆ ಇಷ್ಟವಿಲ್ಲ. ಹೀಗಾಗಿ, ಎರಡೂ ನೇಮಕಾತಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಹಿ ಹಾಕಿಲ್ಲ ಎನ್ನಲಾಗಿದೆ.
Related Articles
ಈ ಮಧ್ಯೆ, ರಾಜ್ಯ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಒಂದು ನಾಮನಿರ್ದೇಶನ ಸ್ಥಾನಕ್ಕೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ವಿಶೇಷ ಅಧಿಕಾರಿ ತಿಪ್ಪೇಸ್ವಾಮಿ ಹೆಸರು ಕೇಳಿಬರುತ್ತಿದೆ.
Advertisement
ಒಂದು ನಾಮನಿರ್ದೇಶನ ಸ್ಥಾನ ಜೆಡಿಎಸ್‌ಗೆ ಸಿಗಲಿದ್ದು ಆ ಸ್ಥಾನಕ್ಕೆ ತಿಪ್ಪೇಸ್ವಾಮಿ ಅವರನ್ನು ನೇಮಿಸಲು ರೇವಣ್ಣ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ. ತಿಪ್ಪೇಸ್ವಾಮಿಯವರು ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ವಿಶೇಷ ಅಧಿಕಾರಿಯಾಗಿದ್ದರು. ಆದರೆ, ಪರಿಷತ್ ನಾಮನಿರ್ದೇಶನ ಸ್ಥಾನಕ್ಕೆ ಪಕ್ಷದ ವಲಯದಲ್ಲಿ ಮಧು ಬಂಗಾರಪ್ಪ, ಕೋನರೆಡ್ಡಿ, ಸುರೇಶ್‌ಬಾಬು, ರಮೇಶ್‌ಬಾಬು ಅವರ ಹೆಸರು ಕೇಳಿಬಂದಿತ್ತು.