ಬೆಂಗಳೂರು: ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಚಂದ್ರಶೇಖರ್ ಅವರು ಬುಧವಾರ ಬೆಂಬಲಿಗರೊಂದಿಗೆ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಯಡಿಯೂರಪ್ಪ ಅವರು ಪಕ್ಷದ ಧ್ವಜವನ್ನು ನೀಡುವ ಮೂಲಕ ಕಮಲ ಪಾಳಯಕ್ಕೆ ಸ್ವಾಗತಿಸಿದರು. ಈ ವೇಳೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಉಪಸ್ಥಿತರಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು 2 ದಿನಗಳಲ್ಲಿ ರಾಮನಗರದಲ್ಲಿ ಬೃಹತ್ ಸಮಾವೇಶ ನಡೆಸುವುದಾಗಿ ತಿಳಿಸಿದರು.
ರಾಮನಗರ ಉಪಚುನಾವಣೆಗೆ ರಣತಂತ್ರ ಹೂಡಿರುವ ಬಿಜೆಪಿ ಕಾಂಗ್ರೆಸ್ ಮತ ಬುಟ್ಟಿಗೆ ಕೈ ಹಾಕಿ ಪಕ್ಷವನ್ನು ಬಲ ಪಡಿಸಲು ರಣ ತಂತ್ರ ಹೂಡಿದೆ.
ಚಂದ್ರ ಶೇಖರ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ.