Advertisement

ಕಾಂಗ್ರೆಸ್ ಸಂಸದ ಮನೀಶ್ ತಿವಾರಿಗೆ ಕೋವಿಡ್-19 ಸೋಂಕು ದೃಢ

09:08 PM Nov 16, 2020 | Suhan S |

ನವದೆಹಲಿ : ಮಾಜಿ ಕೇಂದ್ರ ಸಚಿವ,ಕಾಂಗ್ರೆಸ್ ಸಂಸದ ಮನೀಶ್ ತಿವಾರಿಗೆ ಕೋವಿಡ್ ಪಾಸಿಟಿವ್  ದೃಢವಾಗಿದೆ. ಈ ಬಗ್ಗೆ ಸ್ವತಃ ಮನೀಶ್ ತಿವಾರಿ ಅವರು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Advertisement

ಟ್ವೀಟರ್ ನಲ್ಲಿ ತಮಗೆ ಕೋವಿಡ್ ಪಾಸಿಟಿವ್ ದೃಢವಾಗಿರುವ ಬಗ್ಗೆ ಮಾಹಿತಿ ನೀಡಿರುವ ಅವರು , “ ಇಂದು ಮಧ್ಯಾಹ್ನ ಕೋವಿಡ್ ಪರೀಕ್ಷೆ ಮಾಡಿಸಿದಾಗ ನನಗೆ ಕೋವಿಡ್  ಪಾಸಿಟಿವ್ ತಗಲಿರುವುದು ದೃಢವಾಗಿದೆ. ಕಳೆದ ರಾತ್ರಿ 2 ಗಂಟೆಗೆ ಎದ್ದಾಗ ಸಣ್ಣ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಬೆಳಗ್ಗೆ 2 ಪರೀಕ್ಷೆ ಮಾಡಿಸಿದ್ದೇನೆ, ಈ ವೇಳೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಇತರ ಯಾವುದೇ ರೋಗ ಲಕ್ಷಣಗಳಿಲ್ಲ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದ ಎಲ್ಲರೂ ಮುಂಜಾಗ್ರತೆ ವಹಿಸಿ” ಎಂದು ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

 ಮನೀಶ್ ತಿವಾರಿ ಪಂಜಾಬ್ ರಾಜ್ಯದ ಆನಂದ್ ಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಾಂಗ್ರೆಸ್ ರಾಜ್ಯಸಭಾ ಸಂಸದ ನೀರಜ್ ದಂಗಿ ಸೇರಿದಂತೆ ಹಲವು ಮುಖಂಡರು ಮನೀಶ್ ತಿವಾರಿ ಅವರ ಶೀಘ್ರ ಗುಣಮುಖಕ್ಕಾಗಿ ಟ್ವೀಟ್ ಮಾಡಿ ಹಾರೈಸಿದ್ದಾರೆ.

 

 

Advertisement

Advertisement

Udayavani is now on Telegram. Click here to join our channel and stay updated with the latest news.

Next