Advertisement

G20;ಆಹ್ವಾನವಿಲ್ಲ ಎಂದ ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದ ಬಿಜೆಪಿ

05:13 PM Sep 09, 2023 | Team Udayavani |

ಹೊಸದಿಲ್ಲಿ : ಜಿ20 ಔತಣಕೂಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಹ್ವಾನ ನೀಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ಶನಿವಾರ ತಿರುಗೇಟು ನೀಡಿದೆ.

Advertisement

ಬಿಜೆಪಿಯ ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ಅವರು ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ “2019 ರ ಚುನಾವಣೆಯಲ್ಲಿ ಕಾಂಗ್ರೆಸ್ 19.5% ಮತಗಳನ್ನು ಗಳಿಸಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಗಣಿತವನ್ನು ಸರಿಯಾಗಿ ಕಲಿಯಬೇಕು. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಜಿ20 ಔತಣಕೂಟಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

‘ರಾಹುಲ್ ಗಾಂಧಿ ಅವರು ಈ ನಾಯಕರನ್ನು ಕಾಂಗ್ರೆಸ್ ಪಕ್ಷದ ಸಮಂಜಸ ಧ್ವನಿ ಎಂದು ಪರಿಗಣಿಸದಿದ್ದರೆ ಅದು ಅವರ ಸಮಸ್ಯೆ.ಈ ಹೊತ್ತಿನಲ್ಲಿ ಪ್ರತಿಪಕ್ಷಗಳು, ಅದರಲ್ಲೂ ಕಾಂಗ್ರೆಸ್ ಪಕ್ಷ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಂಡು, ವಿಶ್ವ ನಾಯಕರು ಭಾರತವನ್ನು ಶ್ಲಾಘಿಸುತ್ತಿರುವ ಒಂದು ಪ್ರಮುಖ ಅವಕಾಶವನ್ನು ಕಳೆದುಕೊಂಡಿದೆ. ಕ್ಷುಲ್ಲಕ ರಾಜಕೀಯದಿಂದ ಮೇಲೇರಲು ನೋಡಿದೆ.ಕಾಂಗ್ರೆಸ್ ನಡೆ ಹಾಸ್ಯಾಸ್ಪದ” ಎಂದು ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next