Advertisement

ನಾಯಕರ ನಡವಳಿಕೆಯಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ: ವಿಜಯೇಂದ್ರ

03:04 PM Mar 23, 2022 | Team Udayavani |

ಗದಗ: ಹಿಜಾಬ್ ನಂತರದ ಬೆಳವಣಿಗೆಗಳು ಯಾರಿಗೂ ಶೋಭೆ ತರುವಂತದ್ದಲ್ಲ, ಕಾಂಗ್ರೆಸ್ ನಾಯಕರ ನಡುವಳಿಕೆಯಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

Advertisement

ನಗರದಲ್ಲಿ ಜಿಲ್ಲಾ ಬಿಜೆಪಿ ನೂತನ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಂತರ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಹಿಜಾಬ್ ವಿಚಾರವಾಗಿ ಶಾಲಾ ಮಕ್ಕಳ ಮನಸ್ಸನ್ನೂ ಕದಡಿದರು. ಶಾಲಾ ವಾತಾವರಣವನ್ನು ಹಾಳು ಮಾಡುವ ಪ್ರಯತ್ನ ನಡೆಯಿತು. ಈ ಬಗ್ಗೆ ಹೈಕೋರ್ಟ್ ನೀಡಿದ ತೀರ್ಪನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದರು.

ಆದರೆ, ಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ಕೊಡಲಾಯಿತು. ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಆಕ್ರೋಶ ವ್ಯಕ್ತಪಡಿಸಿದ ರು. ಪ್ರತಿಯೊಂದು ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಎಲ್ಲ ಸಮುದಾಯದವರು ಒಟ್ಟಿಗೆ ಇರಬೇಕು. ಸಮಾಜದಲ್ಲಿ ಶಾಂತಿ ನೆಲೆಸಬೇಕು ಎಂಬುದು ಎಲ್ಲರ ಅಪೇಕ್ಷೆ. ಆದರೆ, ಹೈಕೋರ್ಟ್ ಆದೇಶದ ಬಳಿಕ ಅವರ ಚಟುವಟಿಕೆಗಳನ್ನು ಯಾರೂ ಒಪ್ಪುವಂತದ್ದಲ್ಲ. ಅದನ್ನು ನೋಡಿಯೂ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವೂ ಇಲ್ಲ ಎಂದರು.

ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದಕ್ಕೆ ಯಾವ ರೀತಿ ಸ್ಪಂದಿಸಬೇಕು ಎಂದು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಈ ಕುರಿತು ಕಾಂಗ್ರೆಸ್ ನಾಯಕರು ಮೌನಕ್ಕೆ ಶರಣಾಗಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು ಹತಾಷರಾಗಿದ್ದಾರೆ. ಕಳೆದ ತಿಂಗಳವರೆಗೂ ರಾಜ್ಯದಲ್ಲಿ ಇನ್ನೇನು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಯ್ತು ಎಂಬ ಜೋಷ್‌ನಲ್ಲಿದ್ದರು. ಪಂಚರಾಜ್ಯ ಚುನಾವಣಾ ಫಲಿತಾಂಶ ದಿಂದ ಕಾಂಗ್ರೆಸ್ ನಾಯಕರಿಗೆ ನಿದ್ದೆ ಬರುತ್ತಿಲ್ಲ. ಮಹತ್ವದ ವಿಚಾರದಲ್ಲಿ ಯಾವುದೇ ನಿಲುವು ಕೈಗೊಳ್ಳಲಾಗಷ್ಟು ಕಾಂಗ್ರೆಸ್ ಗೊಂದಲದಲ್ಲಿದೆ ಎಂದು ಲೇವಡಿ ಮಾಡಿದರು.

Advertisement

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯಿಂ ದಲೇ ಕಾಂಗ್ರೆಸ್ ಮುಕ್ತ ಕರ್ನಾಟಕವಾಗುತ್ತದೆ. ರಾಜ್ಯದಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ 224  ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಹುದಿತ್ತು. ಪ್ರತೀ ಉಪಚುನಾವಣೆಯಲ್ಲೂ ನನ್ನ ಹೆಸರು ಕೇಳಿಬರುತ್ತದೆ. ಅದರಂತೆ ಗದಗಿನಿಂದ ಸ್ಪರ್ಧೆಸುವ ಬಗ್ಗೆ ಮಾಧ್ಯಮದವರು ಕೇಳಿದ್ದಕ್ಕೆ ಧನ್ಯವಾದ. ಚುನಾವಣೆಗಿಂತ ಹೆಚ್ಚಾಗಿ ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡುತಿದ್ದೇನೆ ಎಂದಷ್ಟೇ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಮುಖರಾದ ಶ್ರೀಪತಿ ಉಡುಪಿ, ರಾಜು ಕುರಡಗಿ, ಭೀಮಸಿಂಗ್ ರಾಥೋಡ್, ಸುಧೀರ್ ಖಾಟಿಗರ, ಅನಿಲ್ ಅಬ್ಬಿಗೇರಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next