Advertisement

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

03:18 PM May 05, 2024 | Kavyashree |

ಗಂಗಾವತಿ: ಸಂವಿಧಾನ ಬದಲಿಸುವ ಹೇಳಿಕೆಯನ್ನು ನೀಡುತ್ತಾ ಹಿಂದುಳಿದ ವರ್ಗವನ್ನು ಭಯದ ವಾತಾವರಣದಲ್ಲಿ ನಿಲ್ಲಿಸಲು ಹವಣಿಸುತ್ತಿರುವ ಸಂಘ ಪರಿವಾರ ಮತ್ತು ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಬೇಕು. ಇದರಿಂದ ಎಸ್.ಸಿ. ಎಸ್.ಟಿ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದವರು ನೆಮ್ಮದಿಯಿಂದ ಇರಲು ಸಾಧ್ಯ. ಆದ್ದರಿಂದ ಕೊಪ್ಪಳದ ಕಾಂಗ್ರೆಸ್ ಅಭ್ಯರ್ಥಿ ಕೆ .ರಾಜಶೇಖರ ಹಿಟ್ನಾಳ್ ಅವರಿಗೆ ಮತ ನೀಡುವಂತೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

Advertisement

ಅವರು ಕೊಪ್ಪಳ ಲೋಕಸಭೆ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳ ಪರವಾಗಿ ಹಿರೇ ಜಂತಕಲ್, ಚಲವಾದಿ ಒಣಿಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್ ನೀಡಿದ ಪ್ರಕಾರ, ಮಾತು ಕೊಟ್ಟಂತೆ ನಮ್ಮ ಸರ್ಕಾರ ಆಡಳಿತ ಮಾಡುತ್ತದೆ. ಅದೇ ರೀತಿಯಾಗಿ ಈಗ ಕೇಂದ್ರ ಸರ್ಕಾರವು ಐದು ಗ್ಯಾರಂಟಿಗಳನ್ನು ಭರವಸೆ ಕೊಟ್ಟಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ  ಪ್ರತಿ ಮನೆಗೂ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಮೂಲಕ ಕರ್ನಾಟಕದ ಮನೆಗಳನ್ನು ಬೆಳಗಿದ ಗೃಹಜ್ಯೋತಿ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೂಡಲೇ ಕುಟುಂಬದ ಪ್ರತಿಯೊಬ್ಬರಿಗೂ 25 ಲಕ್ಷದವರೆಗೆ ಆರೋಗ್ಯ ವಿಮೆ ನೀಡಲಾಗುವುದು ಎಂದ ಅವರು ಕಾಂಗ್ರೆಸ್ ಗ್ಯಾರಂಟಿಗಳು ರಾಜ್ಯದ ಜನರ ಬದುಕುಗಳಲ್ಲಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದರು ಹೇಳಿದರು.

Advertisement

ಕರ್ನಾಟಕದ ಪ್ರಗತಿ, ಕಾಂಗ್ರೆಸ್ ಗ್ಯಾರಂಟಿ. ಇಂತಹ ಉತ್ತಮ ಯೋಜನೆಗಳು ನಮ್ಮ ಕಾಂಗ್ರೆಸ್ ಪಕ್ಷ ನಿಮಗಾಗಿ ನೀಡಿದೆ. ಅದರಂತೆ ನಡೆದುಕೊಳ್ಳುತ್ತಿದೆ ಎಂದ ಅವರು ಆದರೆ ಬಿಜೆಪಿ ಪಕ್ಷವು ಇವತ್ತಿನ ದಿನಮಾನಗಳಲ್ಲಿ ಪ್ರಜಾಪ್ರಭುತ್ವಕ್ಕೆ ದಕ್ಕೆ ತರುವಂತಹ ಕೆಲಸ ಬಿಜೆಪಿ ಸರ್ಕಾರ ಮಾಡುತ್ತಿರುವುದರಿಂದ ಜನ ಸಾಮಾನ್ಯರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಕ್ಕಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರೆದಿರುವ ಸಂವಿಧಾನದಿಂದ. ಹಾಗಾಗಿ ಇವತ್ತಿನ ದಿನಮಾನಗಳಲ್ಲಿ ಬಿಜೆಪಿ ಸರ್ಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ನಾವು ಗೆದ್ದರೆ ಬದಲಾವಣೆ ಮಾಡುತ್ತಿವೆ ಎಂದು ಪದೇ ಪದೇ ಹೇಳಿಕೆ ನೀಡಿರುವುದು ತುಂಬಾ ನೋವುಂಟಾಗಿದೆ ಎಂದರು.

ಈ ಚುನಾವಣೆಯಲ್ಲಿ ಸಂವಿಧಾನಕ್ಕೆ ಯಾವುದೇ ಅದಕ್ಕೆ ಹಾಕಿದಾಗ ಅವರಿಗೆ ತಕ್ಕ ಪಾಠ ಕಲಿಸಬೇಕಾದರೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಅಮೂಲ್ಯವಾದ ಮತವನ್ನು ಕೊಟ್ಟು ರಾಜಶೇಖರ್ ಹಿಟ್ನಾಳ್ ಅವರನ್ನು ಅತಿ ಪ್ರಚಂಡ ಬಹುಮತದಿಂದ ಆರಿಸಿ ತರಬೇಕೆಂದು ತಮ್ಮಲ್ಲಿ ಕಳಕಳಿಯಿಂದ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಗೆದ್ದು ಅಧಿಕಾರಕ್ಕೆ ಬಂದರೆ ಮುಂದಿನ ದಿನಗಳಲ್ಲಿ ನಮ್ಮ ಅದೃಷ್ಟ ಚೆನ್ನಾಗಿರುತ್ತದೆ. ನಮ್ಮ ರೈತರ ವಿವಿಧ ರೀತಿಯ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಅವುಗಳಿಗೆ ಪರಿಹಾರ ಒದಗಿಸಿಕೊಳ್ಳಲು ‌ಸಹಾಯವಾಗಲು ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದರು.

ಇನ್ನುಳಿದ ನಮ್ಮ ಭಾಗದ ಜನತೆಯ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಅವುಗಳನ್ನು ಜಾರಿಗೆ ತರಲು ಲೋಕಸಭೆಯಲ್ಲಿ ನಮ್ಮ ಪರವಾಗಿ ಧ್ವನಿ ಎತ್ತಿ ಎಲ್ಲಾ ಜನರ ಹಲವಾರು ಕೆಲಸ ಕಾರ್ಯಗಳನ್ನು ಮಾಡಲು ಯೋಗ್ಯ ವ್ಯಕ್ತಿ ಸಿಕ್ಕಿದ್ದಾರೆ. ಇವರಿಗೆ ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿ, ಇವರ ಚಿಹ್ನೆ ಕಾಂಗ್ರೆಸ್ ಹಸ್ತದ ಗುರುತಿಗೆ ಕ್ರ.ಸಂ. 2ಕ್ಕೆ ಬಟನ್ ಒತ್ತಿ ಮೇ 7 ರಂದು ನಿಮ್ಮ ಮತ ಚಲಾಯಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ನಗರಸಭೆ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹುಸೇನಪ್ಪ ಹಂಚಿನಾಳ ವಕೀಲ, ಮುಖಂಡ ನಾಗರಾಜ ನಂದಾಪುರ, ಹುಲುಗಪ್ಪ ಮಾಗಿ ಪರಶುರಾಮ್ ಕಿರಿಕಿರಿ, ಭೀಮಣ್ಣ ಕರೆಮೂತಿ ಸೇರಿದಂತೆ ಅನೇಕ ಕಾಂಗ್ರೆಸ್ ಅಭಿಮಾನಿಗಳು ಭಾಗವಹಿಸಿದರು.

ಉದಯವಾಣಿ ಸಮಾಚಾರ

Advertisement

Udayavani is now on Telegram. Click here to join our channel and stay updated with the latest news.

Next