Advertisement

ಮಹಾರಾಷ್ಟ್ರ ಚುನಾವಣೆ; ಕಾಂಗ್ರೆಸ್, ಎನ್ ಸಿಪಿ ತಲಾ 125 ಕ್ಷೇತ್ರಗಳಲ್ಲಿ ಸ್ಪರ್ಧೆ; ಪವಾರ್

09:38 AM Sep 17, 2019 | Nagendra Trasi |

ಮುಂಬೈ:ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್ ಸಿಪಿ(ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ) ಹಾಗೂ ಕಾಂಗ್ರೆಸ್ ತಲಾ 125 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಸೋಮವಾರ ತಿಳಿಸಿದ್ದಾರೆ.

Advertisement

ಕಾಂಗ್ರೆಸ್ ಹಾಗೂ ಎನ್ ಸಿಪಿ ನಡುವಿನ ಒಪ್ಪಂದದ ಪ್ರಕಾರ, ಉಳಿದ 38 ಸ್ಥಾನಗಳು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲಾಗುವುದು ಎಂದು ಪವಾರ್ ಟ್ವೀಟ್ ಮಾಡಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿಗೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಹೊಸ ಮುಖಗಳಿಗೆ ಅವಕಾಶ ಕೊಡಲಿದ್ದು, ಕೆಲವು ಸ್ಥಾನಗಳನ್ನು ಕಾಂಗ್ರೆಸ್ ಜತೆ ಅದಲು, ಬದಲು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

2014ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಸೀಟು ಹಂಚಿಕೆಯಲ್ಲಿ ಹೊಂದಾಣಿಕೆಯಾಗದಿದ್ದ ಹಿನ್ನೆಲೆಯಲ್ಲಿ 15 ವರ್ಷಗಳ ಮೈತ್ರಿಯಿಂದ ಎನ್ ಸಿಪಿ ದೂರ ಉಳಿದಿತ್ತು. 2014ರಲ್ಲಿ ಕಾಂಗ್ರೆಸ್ 42 ಸ್ಥಾನಗಳಲ್ಲಿ ಹಾಗೂ ಎನ್ ಸಿಪಿ 41 ಸ್ಥಾನಗಳಲ್ಲಿ ಜಯಗಳಿಸಿತ್ತು. ಭಾರತೀಯ ಜನತಾ ಪಕ್ಷ 122 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next