Advertisement

ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್‌ ಅಧಿಕಾರ ಅಗತ್ಯ

09:38 PM Apr 03, 2019 | Lakshmi GovindaRaju |

ಕನಕಪುರ: ಭಾರತ ದೇಶವನ್ನು ಸಂವಿಧಾನ ಬದ್ಧವಾಗಿ ಆಡಳಿತ ನಡೆಸಿ ಸಮಗ್ರತೆಯನ್ನು ಕಾಪಾಡಲು ಯುವಕರ ಮಹಿಳೆಯರ, ದೀನ ದಲಿತರ ಅಲ್ಪಸಂಖ್ಯಾತರ ಹಿಂದುಳಿದವರ ಹಿತವನ್ನು ಕಾಪಾಡಲು ಕಾಂಗ್ರೆಸ್‌ ಸರ್ಕಾರದಿಂದ ಮಾತ್ರ ಸಾಧ್ಯವಿದ್ದು, ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಸಂಸದ ಡಿ.ಕೆ.ಸುರೇಶ್‌ ಮನವಿ ಮಾಡಿದರು.

Advertisement

ಕನಕಪುರ ತಾಲೂಕಿನ ಮರಳವಾಡಿಯ ಬಸ್‌ ನಿಲ್ದಾಣದ ವೃತ್ತದಲ್ಲಿ ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರ ನಡೆಸಿ ಮಾತನಾಡಿ, ಕಳೆದ 5 ವರ್ಷಗಳಿಂದ ದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ನಡೆಯದೇ ಕೇಂದ್ರ ಸರ್ಕಾರ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಅರೋಪಿಸಿದರು.

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದು, ಲೋಕಸಭೆಯಲ್ಲಿ ಅಥವಾ ಮನ್‌ ಕೀ ಬಾತ್‌ ನಲ್ಲಾಗಲೀ ಒಂದು ದಿನವೂ ಮಾತನಾಡಿಲ್ಲ ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದು ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿದ್ದು, ನರೇಗಾ ಯೋಜನೆಯಲ್ಲಿ ರಾಜ್ಯಕ್ಕೆ 2500 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಿದೆ ಎಂದು ಆರೋಪಿಸಿದರು.

ರೈತರ ನೆರವಿಗೆ ಬಾರದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಬಿಟ್ಟು ಉಳಿದ ಮಿತ್ರಪಕ್ಷಗಳು ಬಿಜೆಪಿ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿವೆ, ಚುನಾವಣಾ ಹೊಸ್ತಿಲಲ್ಲಿ ರೈತರ ಖಾತೆಗಳಿಗೆ ನೇರವಾಗಿ 2000 ಹಣ ಬಿಡುಗಡೆ ಮಾಡುವುದು ಚುನಾವಣಾ ಗಿಮಿಕ್‌ ಅಗಿದ್ದು ಈ ಹಣವೂ ಸಹ ರೈತರ ಖಾತೆಗಳಿಗೆ ಜಮೆಯಾಗಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

Advertisement

ರಾಷ್ಟ್ರದ ಬಡತನದ ಬಗ್ಗೆ ಇವರಿಗೆ ಚಿಂತನೆ ಇಲ್ಲ ಬಡವರಿಗೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿ ಅವರನ್ನು ಇನ್ನೂ ಕಷ್ಟದ ಪರಿಸ್ಥಿತಿಗೆ ದೂಡುತ್ತಿದ್ದಾರೆ ಕೇವಲ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿರುವ ಮೋದಿ ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿ ಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದರು.

ಶಾಸಕಿ ಅನಿತಾಕುಮಾರಸ್ವಾಮಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ದಣಿವರಿಯದ ನಾಯಕ ಡಿ.ಕೆ.ಸುರೇಶ್‌ ನಿರಾಯಾಸವಾಗಿ ಗೆಲುವು ಸಾ ಧಿಸಲಿದ್ದಾರೆ ಅಭಿವೃದ್ಧಿ ಪರ ಚಿಂತನೆ ಮಾಡುವ ಏಕೈಕ ಸಂಸದರು ನಮ್ಮ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದು ನಮಗೆ ಗೆಲ್ಲಿಸಿದ ಇನ್ನು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲು ನೀವೆಲ್ಲರೂ ಅವಿರತವಾಗಿ ಶ್ರಮಿಸಬೇಕು ಎಂದರು.

ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜು, ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ರಾಮಕೃಷ್ಣ , ಹಾರೋಹಳ್ಳಿ ಮರಳವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆಸಿಬಿ ಅಶೋಕ, ತಾಪಂ ಸದಸ್ಯ ಕೆ.ಎನ್‌.ರಾಮು, ರವಿಕುಮಾರ್‌, ಗೀತಾ ಈಶ್ವರ್‌, ಮಾಜಿ ಸದಸ್ಯ ಎಂ.ಟಿ.ಕುಮಾರ್‌ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಎಸ್‌.ಹರೀಶ್‌ ಕುಮಾರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next