ಬೆಂಗಳೂರು: “”ಹಗ್ಗದ ಮೇಲಿನ ನಡಿಗೆಯಂತೆ ಸರ್ಕಾರ ನಡೆಸುತ್ತಿದ್ದೇನೆ. ಕಾಂಗ್ರೆಸ್‌ನವರು ಹೇಳಿ ದಂತೆ ನಾನು ಕೇಳಬೇಕಾಗಿದೆ.
ನಾನು ಅನುಭವಿಸುತ್ತಿರುವ ನೋವು ನನಗೆ ಮಾತ್ರ ಗೊತ್ತಿದೆ. ಆದರೂ ಎಲ್ಲವನ್ನೂ ಸಹಿಸಿಕೊಂಡು ನಡೆಯುತ್ತಿದ್ದೇನೆ” ಎಂದು ಜೆಡಿಎಲ್‌ಪಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಅಳಲು ತೋಡಿಕೊಂಡಿದ್ದಾರೆ.
ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರ ನಡೆಸುವಲ್ಲಿನ ದೈನಂದಿನ ಒತ್ತಡ ಕುರಿತು ಶಾಸಕರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ವರೆಗೂ ನಾನು ಏನೂ ಮಾತನಾಡುವುದಿಲ್ಲ. ನನ್ನೊಂದಿಗೆ ಸಹಕರಿಸಿ’ ಎಂದು ಭಾವುಕರಾಗಿದ್ದಾರೆ.ಆಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅವರನ್ನು ಸಮಾಧಾನಪಡಿಸಿದರು ಎಂದು ತಿಳಿದು ಬಂದಿದೆ.
ಗೌಡರ ತಾಕೀತು: ಸಮ್ಮಿಶ್ರ ಸರ್ಕಾರದ ಬಗ್ಗೆ ಯಾರೂ ಬಹಿರಂಗವಾಗಿ ಮಾತ ನಾಡಬಾರದು ಎಂದು ಜೆಡಿಎಸ್ ಸಚಿವರು, ಶಾಸಕರಿಗೆ ಮಾಜಿ ಪ್ರಧಾನಿ ದೇವೇಗೌಡರು ತಾಕೀತು ಮಾಡಿದ್ದಾರೆ.
ಬುಧವಾರ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ
ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಜ.20 ಹಾಗೂ 30ರಂದು ನಡೆಯಲಿರುವ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕೇರಳದಲ್ಲಿ ಎಡಪಕ್ಷಗಳ ಜತೆ,ಕರ್ನಾಟಕದಲ್ಲಿ ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚಿಸಿದ್ದೇವೆ ಎಂದರು.