Advertisement
ಅದೇ ರೀತಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿ ಈ ಬೆಳವಣಿಗೆಗಳ ಕುರಿತು ಪಕ್ಷದ ಮುಖಂಡರೊಂದಿಗೆ ಸಮಾ ಲೋಚನೆ ನಡೆಸಲಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ವ್ಯಸ್ತರಾಗಿರುವುದ ರಿಂದ ಸದ್ಯಕ್ಕೆ ರಾಜ್ಯ ಭೇಟಿ ಇಲ್ಲ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.
ಹೈಕೋರ್ಟ್ ತೀರ್ಪು ಹೊರಬಿದ್ದ ಸ್ವಲ್ಪ ಹೊತ್ತಿನಲ್ಲಿ ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹತ್ತಕ್ಕೂ ಹೆಚ್ಚು ಸಚಿವರು ಸಿಎಂ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.