Advertisement

Congress ಪಕ್ಷಕ್ಕೆ ಅಧಿಕಾರ ಮತ್ತು ಪ್ರಧಾನಿ ಹುದ್ದೆಯಲ್ಲಿ ಆಸಕ್ತಿಯಿಲ್ಲ: ಖರ್ಗೆ

02:38 PM Jul 18, 2023 | Team Udayavani |

ಬೆಂಗಳೂರು: 26 ವಿಪಕ್ಷಗಳ ಪ್ರಮುಖ ನಾಯಕರು ಬೆಂಗಳೂರಿನಲ್ಲಿ ಸಭೆ ಸೇರಿದ್ದು, ಮುಂದಿನ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಎದುರಿಸುವ ಬಗ್ಗೆ ತಯಾರಿ ನಡೆಸುತ್ತಿದ್ದಾರೆ.

Advertisement

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ ಎಂದರು. ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡು ಮಾತನಾಡಿದ ಅವರು, ಆಡಳಿತ ಪಕ್ಷದ ಅಧ್ಯಕ್ಷರು ಮತ್ತು ಪಕ್ಷದ ನಾಯಕರು ಹಳೆಯ ಮಿತ್ರರನ್ನು ಪಡೆದುಕೊಳ್ಳಲು ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ವಿಪಕ್ಷಗಳ ಸಮಾವೇಶಕ್ಕೆ IAS ಅಧಿಕಾರಿಗಳ ಬಳಕೆ: ಸರ್ಕಾರದ ವಿರುದ್ಧ ಎಚ್ ಡಿಕೆ ಗುಡುಗು

“ನಾವು 26 ಪಕ್ಷಗಳು, 11 ರಾಜ್ಯಗಳಲ್ಲಿ ಸರ್ಕಾರವಿದೆ; ಬಿಜೆಪಿ 303 ಸ್ಥಾನಗಳನ್ನು ಸುಮ್ಮನೆ ಪಡೆಯಲಿಲ್ಲ, ಅವರು ಮಿತ್ರಪಕ್ಷಗಳ ಮತಗಳನ್ನು ಬಳಸಿ ನಂತರ ಅವುಗಳನ್ನು ತಿರಸ್ಕರಿಸಿದೆ” ಎಂದು ಅವರು ಸಭೆಯಲ್ಲಿ ಹೇಳಿದರು.

“ರಾಜ್ಯ ಮಟ್ಟದಲ್ಲಿ ನಮ್ಮಲ್ಲಿ ಕೆಲವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬುದು ನಮಗೆ ತಿಳಿದಿದೆ, ಈ ಭಿನ್ನಾಭಿಪ್ರಾಯಗಳು ಸೈದ್ಧಾಂತಿಕವಲ್ಲ, ಈ ಭಿನ್ನಾಭಿಪ್ರಾಯಗಳು ಅಷ್ಟು ದೊಡ್ಡದಲ್ಲ. ಸಾಮಾನ್ಯ ಮತ್ತು ಮಧ್ಯಮ ವರ್ಗದವರಿಗೆ, ಯುವಕರಿಗಾಗಿ ನಾವು ಹಿಂದಡಿಯಿಡಲು ಸಾಧ್ಯವಿಲ್ಲ. ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ತೆರೆಮರೆಯಲ್ಲಿ ಮೌನವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಖರ್ಗೆ ಹೇಳಿದರು.

Advertisement

ಪಕ್ಷಗಳು ಸೋಮವಾರ ಸೂಚಿಸಿದ್ದರಿಂದ ಹೊಸ ಗುಂಪಿನ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಹೆಸರಿಸುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಅವರು ಸಂಚಾಲಕರಾಗಿ ಇರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next