Advertisement

Congress ಪ್ರಮಾಣ ವಚನ: CET ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ

07:45 PM May 19, 2023 | Team Udayavani |

ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ‌ ಸಮಾರಂಭ ಇರುವ ಕಾರಣ ಸುತ್ತಮುತ್ತಲಿನ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

Advertisement

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮನವಿ ಮಾಡಿದ್ದು, ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ, ಆಯ್ದ ಕೇಂದ್ರಗಳಲ್ಲಿ ಮಧ್ಯಾಹ್ನ ಪರೀಕ್ಷೆ ಬರೆಯುವವರಿಗೆ ಊಟದ ವ್ಯವಸ್ಥೆ ಮಾಡುವಂತೆ ವ್ಯವಸ್ಥಾಪಕ ಮಂಡಳಿಗೆ ತಿಳಿಸಲಾಗಿದೆ. ಯಾವುದೇ ಸಹಾಯ ಬೇಕಿದ್ದರೂ ಪೊಲೀಸರನ್ನು ಸಂಪರ್ಕಿಸಿ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದೆ.

ಇದನ್ನೂ ಓದಿ : CET ದಿನ ಪ್ರಮಾಣವಚನ: ಸಿದ್ದರಾಮಯ್ಯಗೆ ಬಿ.ಎಲ್.ಸಂತೋಷ್ ತಿರುಗೇಟು

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಗಣ್ಯರು ಮತ್ತು ಕಾಂಗ್ರೆಸ್ ಕಾರ್ಯಕರತರು ಸೇರಲಿರುವ ಕಾರಣ ಕಂಠೀರವ ಕ್ರೀಡಾಂಗಣದ ಸುತ್ತ ಮುತ್ತಲಿನ ರಸ್ತೆಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹಲವು ಮಾರ್ಗಗಳನ್ನು ಬಂದ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next