Advertisement

ಕಾಂಗ್ರೆಸ್‌ ಕಚೇರಿ ಧ್ವಂಸ: 10 ಮಂದಿ ಬಂಧನ

08:51 PM May 05, 2023 | Team Udayavani |

ಜಬಲ್ಪುರ್‌: ಮಧ್ಯಪ್ರದೇಶದ ಜಬಲ್ಪುರ ನಗರದಲ್ಲಿ ಕಾಂಗ್ರೆಸ್‌ ಕಚೇರಿ ಧ್ವಂಸ ಮಾಡಿದ ಆರೋಪದಲ್ಲಿ ಒಬ್ಬ ಬಜರಂಗದಳ ಕಾರ್ಯಕರ್ತ ಸೇರಿದಂತೆ 10 ಮಂದಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದನ್ನು ವಿರೋಧಿಸಿ ಜಬಲ್ಪುರದಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಬಲ್ದಿಯೋ ಬಾಗ್‌ ಪ್ರದೇಶದಲ್ಲಿರುವ ಕಾಂಗ್ರೆಸ್‌ ಕಚೇರಿಗೆ ನುಗ್ಗಿ, ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ 25 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದುವರೆಗೂ ಬಜರಂಗದಳ ಕಾರ್ಯಕರ್ತ ಸುಮಿತ್‌ ಸಿಂಗ್‌ ಠಾಕೂರ್‌ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next