Advertisement
ಮಾಜಿ ಸಚಿವರಾದ ಜಮೀರ್ ಅಹಮದ್, ನಸೀರ್ ಅಹಮದ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹಮದ್ ಮೂಲಕ ಇಬ್ರಾಹಿಂಗೆ ತಿರುಗೇಟು ನೀಡಲು ಹಾಗೂ ಮುಸ್ಲಿಂ ಸಮುದಾಯವನ್ನು ಹಿಡಿದಿಟ್ಟು ಕೊಳ್ಳಲು ಮುಂದಾಗಿದ್ದಾರೆ. ಇವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಸ್ಲಿಂ ಧರ್ಮ ಗುರುಗಳು ಸಹಿತ ಸಮುದಾಯದ ಪ್ರಮುಖರನ್ನು ಭೇಟಿ ಮಾಡಲು ಯೋಜನೆ ರೂಪಿಸಲಾಗಿದೆ. ಕರಾವಳಿ ಭಾಗದಲ್ಲಿ ಯು. ಟಿ. ಖಾದರ್‌ಗೆ ಈ ಉಸ್ತುವಾರಿ ನೀಡಲು ತೀರ್ಮಾನಿಸಲಾಗಿದೆ.
ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಡ್ಯ, ಮೈಸೂರು ಸಹಿತ ಹಳೆ ಮೈಸೂರು, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮುಸ್ಲಿಂ ಸಮುದಾಯದ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಸಿ. ಎಂ. ಇಬ್ರಾಹಿಂ ರಾಜ್ಯ ಪ್ರವಾಸ ಮಾಡುತ್ತಿರುವುದು ಕಾಂಗ್ರೆಸ್‌ನಲ್ಲಿ ಆತಂಕ ಮೂಡಿಸಿದೆ.
Related Articles
ಸಿದ್ದರಾಮಯ್ಯ ಎಲ್ಲಿದ್ದರೂ ಅಲ್ಲಿ ಎಚ್. ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಹಾಗೂ ಸಿ.ಎಂ.ಇಬ್ರಾಹಿಂ ಇರುತ್ತಾರೆ ಎಂಬ ಮಾತಿದೆ. ಸಿದ್ದ ರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇಬ್ರಾಹಿಂಗೆ ಯೋಜನ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಅನಂತರ ಭದ್ರಾವತಿಯಲ್ಲಿ ಟಿಕೆಟ್ ನೀಡಿ ಸೋತರೂ ವಿಧಾನ ಪರಿಷತ್ ಸದಸ್ಯರಾಗಿ ಮಾಡ ಲಾಗಿತ್ತು. ಆದರೆ, ಇತ್ತೀಚೆಗೆ ಸಿದ್ದರಾಮಯ್ಯ ಅವರು ಜಮೀರ್ ಹಾಗೂ ನಸೀರ್ ಅಹಮದ್ ಅವರಿಗೆ ಹೆಚ್ಚು ಪ್ರಾಮುಖ್ಯ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಿ.ಎಂ.ಇಬ್ರಾಹಿಂ ದೂರವಾಗಿದ್ದರು.
Advertisement
ಸಿ.ಎಂ.ಇಬ್ರಾಹಿಂಗೆ ಪರ್ಯಾಯ ನಾಯಕ ಅಗತ್ಯವಿಲ್ಲ: ಸತೀಶ್ಲಿಂಗಸುಗೂರು: ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಪರ್ಯಾಯವಾಗಿ ಮುಸ್ಲಿಂ ನಾಯಕರನ್ನು ಬೆಳೆಸಬೇಕಾದ ಅಗತ್ಯ ಕಾಂಗ್ರೆಸ್‌ಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ. ಇಬ್ರಾಹಿಂ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ಪಕ್ಷ ಅಂದ ಮೇಲೆ ಕೆಲವು ಸಣ್ಣಪುಟ್ಟ ಗೊಂದಲಗಳಿರುವುದು ಸಹಜ. ಈ ಸಂಬಂಧ ಇಬ್ರಾಹಿಂ ನೀಡಿರುವ ಸಲಹೆಯನ್ನು ಪಕ್ಷದ ಮುಖಂ ಡರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದರು. ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ರಾಮಮಂದಿರ, ಪಾರ್ಲಿಮೆಂಟ್ ಕಟ್ಟುವ ಅಗತ್ಯವೇನಿತ್ತು? ಬರ ಮತ್ತು ಕೋವಿಡ್ ನಿರ್ವಹಣೆಗೆ ಕಾಳಜಿ ತೋರದೆ 8,000 ಕೋ. ರೂ. ಕೊಟ್ಟು ವಿಮಾನ ಖರೀದಿಸಿದ್ದಾರೆ. ಸಾಮಾನ್ಯ ಜನರು ಹಾಗೂ ಕಾರ್ಮಿಕರ ಹಿತವನ್ನು ಬಲಿ ನೀಡಲಾಗಿದೆ ಎಂದ ಸತೀಶ್, ರಾಜ್ಯದಲ್ಲಿ ಸರಕಾರ ಇದ್ದೂ ಇಲ್ಲದಂತಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ಬಗ್ಗೆ ಅ ಧಿವೇಶನದಲ್ಲಿ ಹೋರಾಟ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಜನತೆಯೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.