ತಿರುವನಂತಪುರಂ: 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೇವಲ ಕಾಂಗ್ರೆಸ್ ಪಕ್ಷ ಸ್ವಂತ ಬಲದಿಂದ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂಬುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಎ.ಕೆ.ಆ್ಯಂಟನಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:RBI ಬಡ್ಡಿ ದರ ಹೆಚ್ಚಳದ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,307 ಅಂಕ ಕುಸಿತ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಇತರ ಪಕ್ಷಗಳ ಜೊತೆ ಕೈಜೋಡಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಉದಯ್ ಪುರ್ ನಲ್ಲಿ ನಡೆಸಲಿರುವ ಚಿಂತನ್ ಶಿಬಿರದಲ್ಲಿ ವಿವರವಾದ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ಆ್ಯಂಟನಿ ತಿಳಿಸಿದ್ದಾರೆ.
ಅವರು ಬುಧವಾರ (ಮೇ 04) ತಿರುವನಂತಪುರಂನಲ್ಲಿ ಇಂಡಿಯನ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್ ಟಿಯುಸಿ)ನ ನ್ಯಾಷನಲ್ ಪ್ಲ್ಯಾಟಿನಂ ಜುಬಿಲಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತ ಈ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
Related Articles
‘ಕೆಲವೊಂದು ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲ ಇಲ್ಲದೆಯೇ ಮೋದಿ ಅವರನ್ನು ಸೋಲಿಸಲು ಸಾಧ್ಯವಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಎ.ಕೆ.ಆ್ಯಂಟನಿ ಎಡಪಕ್ಷಗಳ ಹೆಸರನ್ನು ಹೇಳದೆ ವ್ಯಂಗ್ಯವಾಡಿದ್ದಾರೆ.
ಒಂದು ವೇಳೆ ಎಡಪಕ್ಷಗಳು ಪ್ರಾಮಾಣಿಕವಾಗಿ ಬಿಜೆಪಿ ವಿರೋಧಿ ನಿಲುವನ್ನು ಹೊಂದಿದ್ದರೆ, ರಾಷ್ಟ್ರೀಯ ಮಟ್ಟದಲ್ಲಿ ಎಡಪಕ್ಷಗಳು ಕಾಂಗ್ರೆಸ್ ಪಕ್ಷದ ಜತೆ ಕೈಜೋಡಿಸಲಿ ಎಂದು ಆ್ಯಂಟನಿ ಈ ಸಂದರ್ಭದಲ್ಲಿ ಹೇಳಿದರು.
ಬಿಜೆಪಿ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಲು ವಿರೋಧಿಸುತ್ತಿರುವರು ನಿಜಕ್ಕೂ ದೇಶ ವಿರೋಧಿಗಳಾಗಿದ್ದಾರೆ. ಎಡಪಕ್ಷಗಳು ಬಹಿರಂಗವಾಗಿ ಮೋದಿಯನ್ನು ವಿರೋಧಿಸುತ್ತಿದ್ದರು ಕೂಡಾ, ಅವರು ಮೋದಿಯನ್ನು ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ ಎಂದು ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಸುಧಾಕರನ್ ಆರೋಪಿಸಿದ್ದಾರೆ.