Advertisement

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್‌ ಮನವಿ

01:21 PM May 22, 2020 | Suhan S |

ಲಕ್ಷ್ಮೇಶ್ವರ: ಎಪಿಎಂಸಿ ಕಾಯ್ದೆ ತಿದ್ದುಪಡಿ, ಗ್ರಾಮ ಪಂಚಾಯತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಸೇರಿ ರಾಜ್ಯ ಸರ್ಕಾರದ ಏಕಪಕ್ಷೀಯ ನಿರ್ಧಾರ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Advertisement

ಈ ವೇಳೆ ಮಾತನಾಡಿದ ಜಿಪಂ ಸದಸ್ಯ ಎಸ್‌.ಪಿ.ಬಳಿಗಾರ, ಪಂಚಾಯತಿಗಳಿಗೆ ಚುನಾವಣೆ ನಡೆಸದೇ ಬಿಜೆಪಿ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡುವ ಷಡ್ಯಂತ್ರ ನಡೆದಿದೆ. ಈಗಿರುವ ಸದಸ್ಯರನ್ನು ಮುಂದುವರಿಸಿ 6 ತಿಂಗಳ ಬಳಿಕ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದರು.

ಮಾಜಿ ಶಾಸಕ ಜಿ.ಎಸ್‌. ಗಡ್ಡದೇವರಮಠ ಮಾತನಾಡಿ, ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲೂ ಸರ್ಕಾರ ರೈತರ ಪಾಲಿಗೆ ಕರಾಳ ಶಾಸನವಾದ ಎಪಿಎಂಸಿ ಕಾಯ್ದೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಿದ್ದು ಸಂವಿಧಾನ ವಿರೋಧಿಯಾಗಿದೆ ಎಂದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿವೆ. ಇದುವರೆಗೂ ಘೋಷಣೆಯಾದ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಯಾರೊಬ್ಬರಿಗೂ ಸಹಾಯ ಲಭಿಸಿಲ್ಲ ಎಂದು ದೂರಿದರು. ಮುಖಂಡರಾದ ಯು.ಎನ್‌. ಹೊಳಲಾಪುರ, ಎಂ.ಎಸ್‌. ದೊಡ್ಡಗೌಡರ, ಚನ್ನಪ್ಪ ಜಗಲಿ, ರಾಮಣ್ಣ ಲಮಾಣಿ, ಸೋಮಣ್ಣ ಬೆಟಗೇರಿ, ಫಕ್ಕೀರೇಶ ಮ್ಯಾಟೆಣ್ಣವರ, ಬಸವರಾಜ ಓದುನವರ, ಎಪಿಎಂಸಿ ಅಧ್ಯಕ್ಷ ಜೆ.ಆರ್‌.ಕೊಪ್ಪದ, ರಾಜರತ್ನ ಹುಲಗೂರ, ನಾಗರಾಜ ದೊಡ್ಡಮನಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next